ಜೂನ್ 15ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ!

ಜೂ. 15 ರಂದು ನಡೆಯಲಿರುವ ನೀತಿ ಆಯೋಗದ 5ನೇ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Last Updated : Jun 5, 2019, 01:59 PM IST
ಜೂನ್ 15ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಪ್ರಧಾನಿ ಮೋದಿ ಸಭೆ! title=
File Image

ನವದೆಹಲಿ: ಜೂ. 15 ರಂದು ನಡೆಯಲಿರುವ ನೀತಿ ಆಯೋಗದ 5ನೇ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಕೃಷಿ ಸಮಸ್ಯೆ, ಜಲ ನಿರ್ವಹಣೆ ಹಾಗೂ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಲಭಿಸಿದೆ.

ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ನೀತಿ ಆಯೋಗದ ಸಭೆ ನಡೆಸುತ್ತಿದ್ದು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಸಭೆಯಲ್ಲಿ ಕೌನ್ಸಿಲ್ ಸದಸ್ಯರು, ನೀತಿ ಆಯೋಗದ ಸದಸ್ಯರು, ಕೇಂದ್ರಾಡಳಿತ ಪ್ರದೇಶಗಳ ರಾಜ್ಯಪಾಲರು, ಕೇಂದ್ರ ಸಚಿವರು ಮತ್ತು ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎನ್ನಲಾಗಿದೆ.

Trending News