ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತ ಮತ್ತು ಚೀನಾ ಗಡಿ ಸಮಸ್ಯೆ ಕುರಿತು ಚರ್ಚಿಸಲು ಜೂನ್ 19 ರಂದು ಸರ್ವಪಕ್ಷ ಸಭೆ ಕರೆದಿದ್ದಾರೆ. ಸೋಮವಾರ ರಾತ್ರಿ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ (ಎಲ್‌ಎಸಿ) ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಹಿಂಸಾತ್ಮಕ ಮುಖಾಮುಖಿಯಾದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿದೆ. 


COMMERCIAL BREAK
SCROLL TO CONTINUE READING

ಈ ಕುರಿತಾಗಿ ಪ್ರಧಾನಿ ಕಚೇರಿ ಟ್ವೀಟ್ ಮಾಡಿದ್ದು, 'ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ವರ್ಚುವಲ್ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸುತ್ತಾರೆ' ಎಂದು ತಿಳಿಸಿದೆ. 


ಚೀನಾಕ್ಕೆ ಪಾಠ ಕಲಿಸಲು ಭಾರತದ ಮುಂದಿವೆ 5 ಆಯ್ಕೆಗಳು

ಚೀನಾದ ಪಿಎಲ್‌ಎಯಿಂದ ಭಾರತೀಯ ಸೇನಾ ಸಿಬ್ಬಂದಿಯ ಮೇಲೆ ಸೋಮವಾರ ರಾತ್ರಿ ನಡೆದ ದಾಳಿ ಸುಮಾರು ಆರರಿಂದ ಏಳು ಗಂಟೆಗಳ ಕಾಲ ಮುಂದುವರೆಯಿತು. ವರದಿಗಳ ಪ್ರಕಾರ, ಲಡಾಖ್ ಪ್ರದೇಶದ ಗಾಲ್ವಾನ್ ಕಣಿವೆಯಲ್ಲಿ ದಾಳಿ ನಡೆದ ಸ್ಥಳದಿಂದ ಶವಗಳನ್ನು ಮತ್ತು ಗಾಯಗೊಂಡ ಭಾರತೀಯ ಸೇನಾ ಸಿಬ್ಬಂದಿಯನ್ನು ಸ್ಥಳಾಂತರಿಸಲು ಮಂಗಳವಾರ 16 ಬಾರಿ ಹಾರಾಟ ನಡೆಸಿದ್ದವು.