ನವ ದೆಹಲಿ: ಇಂದು ಗುಜರಾತಿನ ಗಾಂಧಿನಗರ ಸಚಿವಾಲಯದ ಮೈದಾನದಲ್ಲಿ ವಿಜಯ್ ರುಪಾನಿ ಎರಡನೇ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ವಿಜಯ್ ರುಪಾನಿ ಜೊತೆಗೆ 19 ಸಚಿವರಿಗೆ ರಾಜ್ಯಪಾಲ ಒಪಿ ಕೊಹ್ಲಿ ಸಮಾರಂಭದಲ್ಲಿ ಪ್ರಮಾಣವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಹಲವು ಕೇಂದ್ರ ಮಂತ್ರಿಗಳು, ಬಿಜೆಪಿ ಆಡಳಿತ ಹೊಂದಿರುವ 18 ರಾಜ್ಯಗಳ ಮುಖ್ಯಮಂತ್ರಿಗಳು ಉಪಸ್ಥಿತರಿದ್ದರು.


COMMERCIAL BREAK
SCROLL TO CONTINUE READING

ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೆಲವು ಹಳೆಯ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಮೋದಿ ಅವರ ಹಳೆಯ ಪ್ರಮಾಣ ವಚನ ಸಮಾರಂಭದ ಫೋಟೋಗಳನ್ನು ಟ್ವೀಟಿಂಗ್ ಮಾಡುವಾಗ ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.



ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ 2001, 2002, 2007, 2012 ರ ತಮ್ಮ ಪ್ರಮಾಣವಚನ ಸಮಾರಂಭದ ಛಾಯಾಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಛಾಯಾಚಿತ್ರಗಳಲ್ಲಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ವೆಂಕಯ್ಯ ನಾಯ್ಡು ಅವರೊಂದಿಗೆ ಸಹ ಕಾಣಿಸಿಕೊಂಡರು.



ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬಳಿಕ, ವಿಜಯ್ ರೂಪಾನಿ ಅವರ ಸತತ ಎರಡನೆಯ ಅವಧಿಯಾಗಿದೆ. ಪ್ರತಿಜ್ಞೆ ತೆಗೆದುಕೊಳ್ಳುವ ಮೊದಲು, ರೂಪಾನಿ ಮತ್ತು ಪಟೇಲ್ ಅವರು ಸಮಾರಂಭಕ್ಕೆ ಹಾಜರಾಗಲು ಬಂದ ಬಿಜೆಪಿ-ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ, ರೂಪಾನಿ ಕಿತ್ತಳೆ ಬಣ್ಣದ ಜಾಕೆಟ್ ಧರಿಸಿದ್ದರು.