ಚೆನ್ನೈ: ತಮಿಳುನಾಡಿನ ದಿಂಡಿಗಲ್‌ನಲ್ಲಿರುವ ಗಾಂಧಿಗ್ರಾಮ್ ರೂರಲ್ ಇನ್‌ಸ್ಟಿಟ್ಯೂಟ್‌ನ 36ನೇ ಘಟಿಕೋತ್ಸವ ಸಮಾರಂಭದಲ್ಲಿ ಸಂಗೀತ ಮಾಂತ್ರಿಕ ಇಳಯರಾಜ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.ಸಮಾರಂಭದಲ್ಲಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ರಾಜ್ಯಪಾಲ ಆರ್.ಎನ್.ರವಿ ಉಪಸ್ಥಿತರಿದ್ದರು.
ಇದನ್ನೂ ಓದಿ: ಸೋಲಾರ್ ಹಗರಣ ತನಿಖೆ, ಕಾದು ನೋಡಿ ಎಂದ್ರು ಸಿಎಂ ಬೊಮ್ಮಾಯಿ
ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಗಾಂಧಿಗ್ರಾಮವನ್ನು ಮಹಾತ್ಮ ಗಾಂಧಿ ಅವರೇ ಉದ್ಘಾಟಿಸಿದ್ದು, ಮಹಾತ್ಮ ಗಾಂಧಿಯವರ ಗ್ರಾಮೀಣ ಅಭಿವೃದ್ಧಿಯ ಕಲ್ಪನೆಗಳ ಚೈತನ್ಯವನ್ನು ಸಂಸ್ಥೆಯಲ್ಲಿ ನೋಡಬಹುದು ಎಂದು ಹೇಳಿದರು.
#WATCH | Prime Minister Narendra Modi presents an honorary doctorate to music maestro Ilayaraja at the 36th Convocation Ceremony of Gandhigram Rural Institute, Dindigul.
Chief Minister MK Stalin, Governor RN Ravi, and others present at the ceremony. pic.twitter.com/WLtVYpuA4n
— ANI (@ANI) November 11, 2022
ಇದನ್ನೂ ಓದಿ: ಶಾಸಕ ಎನ್. ಮಹೇಶ್ ಕಮಾಲ್...7 ಅನರ್ಹರಲ್ಲಿ 6 ಮಂದಿ ಜಯಭೇರಿ!!
ಇಂದಿನ ಹಲವು ಸವಾಲುಗಳಿಗೆ ಗಾಂಧಿಯವರ ವಿಚಾರಗಳು ಉತ್ತರಗಳನ್ನು ಹೊಂದಿದ್ದು, ಗಾಂಧಿ ಮೌಲ್ಯಗಳು ಹೆಚ್ಚು ಪ್ರಸ್ತುತವಾಗುತ್ತಿವೆ.ಅವರ ಸ್ವಾವಲಂಬನೆಯ ಕಲ್ಪನೆಯಿಂದ ಪ್ರೇರಿತರಾದ ಸರ್ಕಾರವು ಆತ್ಮನಿರ್ಭರ ಭಾರತಕ್ಕಾಗಿ ಕೆಲಸ ಮಾಡುತ್ತಿದೆ.ಖಾದಿಯನ್ನು ಬಹಳ ಸಮಯದಿಂದ ನಿರ್ಲಕ್ಷಿಸಲಾಯಿತು ಮತ್ತು ಮರೆತುಬಿಡಲಾಯಿತು. ಆದರೆ 'ಖಾದಿ ಫಾರ್ ನೇಷನ್, ಖಾದಿ ಫಾರ್ ಫ್ಯಾಶನ್' ಎಂಬ ಕರೆ ಮೂಲಕ, ಇದು ಬಹಳ ಜನಪ್ರಿಯವಾಗಿದೆ ಎಂದು ಹೇಳಿದರು.
Addressing 36th Convocation of Gandhigram Rural Institute in Tamil Nadu. Best wishes to the graduating bright minds. https://t.co/TnzFtd24ru
— Narendra Modi (@narendramodi) November 11, 2022
ಇಂದು ಮುಂಜಾನೆ ಪ್ರಧಾನಿ ಮೋದಿ ಅವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಚಾಲನೆ ನೀಡಿದರು.ಇದು ಚೆನ್ನೈನ ಕೈಗಾರಿಕಾ ಕೇಂದ್ರ ಮತ್ತು ಬೆಂಗಳೂರಿನ ಟೆಕ್ ಮತ್ತು ಸ್ಟಾರ್ಟ್ಅಪ್ ಹಬ್ ಮತ್ತು ಪ್ರಸಿದ್ಧ ಪ್ರವಾಸಿ ನಗರವಾದ ಮೈಸೂರಿನ ನಡುವಿನ ಸಂಪರ್ಕವನ್ನು ವರ್ಧಿಸುತ್ತದೆ" ಎಂದು ಪಿಎಂಒ ಹೇಳಿದೆ.
ಇದನ್ನೂ ಓದಿ : PM Modi in Bengaluru: ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಪ್ರಶ್ನಿಸಿ ಸ್ವಾಗತ ಕೋರಿದ ಸಿದ್ದರಾಮಯ್ಯ
ನಂತರ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ನ್ನು ಉದ್ಘಾಟಿಸಿದರು. ಸುಮಾರು ₹ 5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಟರ್ಮಿನಲ್, ವಿಮಾನ ನಿಲ್ದಾಣದ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಪ್ರಸ್ತುತ ಸಾಮರ್ಥ್ಯ ಸುಮಾರು 2.5 ಕೋಟಿಯಿಂದ ವಾರ್ಷಿಕ 5-6 ಕೋಟಿ ಪ್ರಯಾಣಿಕರಿಗೆ ದ್ವಿಗುಣಗೊಳಿಸುತ್ತದೆ ಎಂದು ಪ್ರಧಾನಮಂತ್ರಿ ಕಚೇರಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.