ನೂತನ ಸಂಸತ್ ಭವನ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೊಸ ಸಂಸತ್ ಭವನದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ವರ್ಷದ ದ್ವಿತೀಯಾರ್ಧದಲ್ಲಿ ಸಂಸತ್ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೊಸ ಸಂಸತ್ ಭವನದ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿದ್ದು, ಮುಂದಿನ ವರ್ಷದ ದ್ವಿತೀಯಾರ್ಧದಲ್ಲಿ ಸಂಸತ್ ಭವನದ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎನ್ನಲಾಗಿದೆ.
ಸಧ್ಯ ಸಂಸತ್ ಭವನದ ನಿರ್ಮಾಣ ಕೆಲಸವನ್ನು ಪರಿಶೀಲಿಸಲು ಆಗಮಿಸಿದ ಪ್ರಧಾನಿ ಮೋದಿ (Narendra Modi), ಕಟ್ಟಡ ನಿರ್ಮಾಣದಲ್ಲಿ ತೊಡಗಿರುವ ಜನರೊಂದಿಗೆ ಮಾತನಾಡಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇದನ್ನೂ ಓದಿ- Ind Vs Eng ಸರಣಿ: ಶಾಸ್ತ್ರಿ ಬಳಿಕ ತಂಡದ ಈ ಇಬ್ಬರು ಸದಸ್ಯರೂ ಕೂಡ 5ನೇ ಟೆಸ್ಟ್ ನಿಂದ ಹೊರಗೆ
ಈ ಕಟ್ಟಡವು ಸೆಂಟ್ರಲ್ ವಿಸ್ಟಾ ಯೋಜನೆಯ ಭಾಗವಾಗಿದ್ದು, ವಿರೋಧ ಪಕ್ಷಗಳಿಂದ ಟೀಕೆಗಳನ್ನು ಎದುರಿಸುತ್ತಿದೆ.2022 ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನವು ಈ ಹೊಸ ಕಟ್ಟಡದಲ್ಲಿ ನಡೆಯಲಿದೆ ಎಂದು ಸರ್ಕಾರಿ ಅಧಿಕಾರಿಗಳು ಹೇಳಿದ್ದಾರೆ. ಹೊಸ ಸಂಸತ್ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿರುತ್ತದೆ ಎನ್ನಲಾಗಿದೆ.
England vs India, 4th Test: ಭಾರತದ ಬೌಲಿಂಗ್ ಕೈಚಳಕಕ್ಕೆ ಇಂಗ್ಲೆಂಡ್ ತತ್ತರ,157 ರನ್ ಗಳ ಜಯ
ಇದು ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ಭವ್ಯವಾದ ಸಂವಿಧಾನ ಸಭಾಂಗಣವನ್ನು ಹೊಂದಿದೆ, ಸಂಸತ್ತಿನ ಸದಸ್ಯರಿಗೆ ಒಂದು ಕೋಣೆ, ಒಂದು ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿದೆ.
ಹೊಸ ಕಟ್ಟಡದಲ್ಲಿ, ಲೋಕಸಭಾ ಚೇಂಬರಿನ 888 ಸದಸ್ಯರಿಗೆ ಆಸನ ಸಾಮರ್ಥ್ಯವನ್ನು ಹೊಂದಿದ್ದು, ರಾಜ್ಯಸಭೆಯು ಸದಸ್ಯರಿಗೆ 384 ಸ್ಥಾನಗಳನ್ನು ಹೊಂದಿರುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.