ನವದೆಹಲಿ: ಪ್ರಧಾನಿಯಾಗಿ ಒಂಬತ್ತು ವರ್ಷಗಳನ್ನು ಪೂರೈಸಿದ ಬೆನ್ನಲ್ಲೇ ಪ್ರಧಾನಿ ಮೋದಿ ದೇಶದ ಜನತೆಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.ಜನರಿಂದ ಅಂತಹ ಪ್ರೀತಿಯನ್ನು ಪಡೆಯುವುದು ಯಾವಾಗಲೂ ವಿನಮ್ರ ಭಾವವನ್ನು ಮತ್ತು ಜನರಿಗಾಗಿ ಇನ್ನಷ್ಟು ಶ್ರಮಿಸುವ ಶಕ್ತಿಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ


ಈ ಕುರಿತಾಗಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ "ಬೆಳಿಗ್ಗೆಯಿಂದ, ನಾನು #9YearsOfModiGovernment ನಲ್ಲಿ ಅನೇಕ ಟ್ವೀಟ್‌ಗಳನ್ನು ನೋಡುತ್ತಿದ್ದೇನೆ,ಇದರಲ್ಲಿ ಜನರು 2014 ರಿಂದ ನಮ್ಮ ಸರ್ಕಾರದ ಬಗ್ಗೆ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಿದ್ದಾರೆ.ಅಂತಹ ಪ್ರೀತಿಯನ್ನು ಸ್ವೀಕರಿಸುವುದು ನಿಜಕ್ಕೂ ವಿನಮ್ರ ಭಾವವನ್ನು ಮೂಡಿಸುತ್ತದೆ ಮತ್ತು ಇದು ಇನ್ನಷ್ಟು ಕಷ್ಟಪಟ್ಟು ಕೆಲಸ ಮಾಡಲು ನನಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ ಎಂದು ಅವರು ಹೇಳಿದ್ದಾರೆ.ಮೇ 30 ರಂದು ಮೋದಿ ಪ್ರಧಾನಿಯಾಗಿ 9 ವರ್ಷ ಅಧಿಕಾರಾವಧಿ ಪೂರೈಸುತ್ತಿರುವ ಹಿನ್ನೆಲೆಯಲ್ಲಿಅವರ ಈ ಟ್ವೀಟ್ ಬಂದಿದೆ. 


Inauguration of Parliament House: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಜರಿಗೆ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿಣಿ ಸರ್ವಾನುಮತದ ಸಹಮತ!


ಈಗ ಇದನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಬಿಜೆಪಿ ದೇಶಾದ್ಯಂತ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ. ಮೇ 30 ಮತ್ತು ಜೂನ್ 30 ರ ನಡುವೆ ದೇಶಾದ್ಯಂತ ಸುಮಾರು 50 ರ್ಯಾಲಿಗಳನ್ನು ನಡೆಸಲು ಬಿಜೆಪಿ ಯೋಜಿಸುತ್ತಿದೆ, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅರ್ಧ ಡಜನ್ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.


ಮೂಲಗಳ ಪ್ರಕಾರ, ಸುಮಾರು ಒಂದು ವರ್ಷ ಬಾಕಿಯಿರುವ ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳಿಗೆ ಈ ಪ್ರಚಾರವು ಚಾಲನೆ ನೀಡಲಿದೆ. ಮೇ 31 ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ಪ್ರಧಾನಿ ಮೋದಿಯವರಿಂದ ಮೆಗಾ ರ್ಯಾಲಿ ಮೂಲಕ ತಲುಪುವ ಅಭಿಯಾನವನ್ನು ಉದ್ಘಾಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ