ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಗುಜರಾತಿನ ರಾಜ್‌ಕೋಟ್‌ನಲ್ಲಿ ಏಮ್ಸ್ (All India Institute of Medical Science) ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಡಿಸೆಂಬರ್ 31ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ರಾಜಕೋಟ್ ದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಗುಜರಾತ್ (Gujarat) ರಾಜ್ಯಪಾಲರು, ಮುಖ್ಯಮಂತ್ರಿ, ಕೇಂದ್ರ ಸಚಿವರು ಮತ್ತು ರಾಜ್ಯ ಸಚಿವರು ಉಪಸ್ಥಿತರಿರುತ್ತಾರೆ.
ಇದನ್ನೂ ಓದಿ: 'ಕಿಸಾನ್ ರೈಲು ಸೇವೆ ರೈತರ ಸಬಲೀಕರಣದತ್ತ ಇಟ್ಟಿರುವ ದೊಡ್ಡ ಹೆಜ್ಜೆಯಾಗಿದೆ'
ಏಮ್ಸ್ (AIIMS) ಆಸ್ಪತ್ರೆ ನಿರ್ಮಾಣ ಮಾಡಲು ರಾಜಕೋಟ್ ನಲ್ಲಿ 201 ಎಕರೆ ಭೂಮಿಯನ್ನು ಮಂಜೂರು ಮಾಡಲಾಗಿದೆ.1195 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಏಮ್ಸ್ ಆಸ್ಪತ್ರೆ ನಿರ್ಮಾಣ ಕಾರ್ಯವು 2022ರ ಮಧ್ಯದ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ.
ಇದನ್ನೂ ಓದಿ: 'ಒಂದು ದೇಶ ಒಂದು ಚುನಾವಣೆ'ಗಾಗಿ 25 ವೆಬಿನಾರ್ ಗಳನ್ನು ನಡೆಸಲು ಮುಂದಾದ ಬಿಜೆಪಿ
20 ಹಾಸಿಗಳ ಆಯುಷ್ ವಿಭಾಗ ಸೇರಿದಂತೆ 750 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯೂ ಇದಾಗಿದ್ದು, ಇದರಲ್ಲಿ 125 MBBS ಸೀಟುಗಳು ಮತ್ತು 60 ಶುಶ್ರೂಷಕರ ಸೀಟುಗಳಿರುತ್ತವೆ ಎಂದು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ ಪ್ರಕಟಣೆ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.