ಬೆಂಗಳೂರು: ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿಗೆ ಆಗಮಿಸಲಿದ್ದಾರೆ. ಮೈಸೂರಿನ ರೇಸ್ ಕೋರ್ಸ್ ಮೈದಾನದಲ್ಲಿ ಲಕ್ಷಾಂತರ ಯೋಗಪಟುಗಳ ಸಮ್ಮುಖದಲ್ಲಿ ಯೋಗ ದಿನಾಚರಣೆಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ.
ಇದನ್ನು ಓದಿ: PM Kisan: ದೇಶಾದ್ಯಂತದ ರೈತರಿಗೆ ಮಹತ್ವದ ಘೋಷಣೆ ಮಾಡಿದ ಕೇಂದ್ರ ಸರ್ಕಾರ
ಇನ್ನು ಈ ಕುರಿತು ಹಾಸನದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, " ಮೈಸೂರು ಮತ್ತು ಯೋಗಕ್ಕೆ ಅವಿನಾಭಾವ ಸಂಬಂಧವಿದೆ. ಮಹಾರಾಜರು, ಇತರರು ಯೋಗಕ್ಕೆ ಪ್ರೋತ್ಸಾಹ ನೀಡಿದ್ದರು. ಅಷ್ಟೇ ಅಲ್ಲದೆ, ಮೈಸೂರಿಗೆ ಸಿಟಿ ಆಫ್ ಯೋಗ ಎಂಬ ಖ್ಯಾತಿ ಕೂಡ ಇದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರು ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಗೆ ಆಗಮಿಸಲಿದ್ದಾರೆ" ಎಂದರು.
ವಿಶ್ವ ಯೋಗ ದಿನಾಚರಣೆ ಮಹತ್ವ:
ಉತ್ತಮ ಆರೋಗ್ಯಕ್ಕೆ ಯೋಗ ಬಹಳ ಮುಖ್ಯ. ದೇಹವನ್ನು ಆರೋಗ್ಯವಾಗಿಡಲು ಯೋಗವು ಮಹತ್ವದ ಕೊಡುಗೆ ನೀಡುತ್ತದೆ. ಇದರ ಮಹತ್ವವನ್ನು ಭಾರತ ಇಡೀ ಜಗತ್ತಿಗೆ ತಿಳಿಸಿದೆ. ಇಂದು ಅಂದರೆ ಜೂನ್ 21 ರಂದು ಯೋಗ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಜೂನ್ 21ರ ಈ ದಿನಾಂಕವು ಕಳೆದ ಕೆಲವು ವರ್ಷಗಳಲ್ಲಿ ಭಾರತದ ಇತಿಹಾಸದಲ್ಲಿ ಮತ್ತು ಪ್ರಪಂಚದಲ್ಲಿ ಪ್ರಮುಖ ಸ್ಥಾನವನ್ನು ಪಡೆದುಕೊಂಡಿದೆ. ಏಳು ವರ್ಷಗಳ ಹಿಂದೆ ಯೋಗವನ್ನು ಮುಖ್ಯವೆಂದು ಪರಿಗಣಿಸಿ, ಇಂದಿನ ದಿನವನ್ನು ಇತಿಹಾಸದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವೆಂದು ದಾಖಲಿಸಲಾಗಿದೆ. ಅಂದಿನಿಂದ ಪ್ರತಿ ವರ್ಷ ಈ ದಿನವನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಆಚರಿಸಲಾಗುತ್ತಿದೆ.
ಇದನ್ನು ಓದಿ: ವಿಚಿತ್ರ ಆಕಾರದ ಮೊಟ್ಟೆ ಇಡುತ್ತಿರುವ ಕೋಳಿ!
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಉಪಕ್ರಮದಲ್ಲಿ ವಿಶ್ವಸಂಸ್ಥೆಯು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಿಸಲು ಕರೆ ನೀಡಿತು. ವಿಶ್ವದ ಎಲ್ಲಾ ದೇಶಗಳು ಈ ಅಭಿಯಾನಕ್ಕೆ ಸೇರಿಕೊಂಡಿವೆ. ಜೂನ್ 21ನ್ನೇ ಈ ದಿನಕ್ಕೆ ಆಯ್ಕೆ ಮಾಡಲು ಮತ್ತೊಂದು ವಿಶೇಷ ಕಾರಣವೆಂದರೆ ವರ್ಷದ 365 ದಿನಗಳಲ್ಲಿ ಜೂನ್ 21 ದೀರ್ಘಾವಧಿಯ ದಿನವಾಗಿದೆ ಮತ್ತು ಯೋಗದ ನಿರಂತರ ಅಭ್ಯಾಸವು ಒಬ್ಬ ವ್ಯಕ್ತಿಗೆ ದೀರ್ಘಾಯುಷ್ಯವನ್ನು ನೀಡುತ್ತದೆ. ಆದ್ದರಿಂದ ಈ ದಿನವನ್ನು ಯೋಗ ದಿನ ಎಂದು ಆಚರಿಸಲು ನಿರ್ಧರಿಸಲಾಯಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.