ಭಯೋತ್ಪಾದಕರನ್ನು ಬೇಟೆಯಾಡದೇ ಬಿಡುವ ಮಾತೇ ಇಲ್ಲ, ಮಣ್ಣಿನಲ್ಲಿ ಹೂತು ಹಾಕುತ್ತೇವೆ : ಉಗ್ರರ ವಿರುದ್ಧ ತೊಡೆ ತಟ್ಟಿ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

PM Modi on Pahalgam Attack: ಪ್ರಧಾನಿ ನರೇಂದ್ರ ಮೋದಿ ಅವರು ಇಡೀ ಜಗತ್ತಿಗೆ ಇಂಗ್ಲಿಷ್‌ನಲ್ಲಿ ಸಂದೇಶ ನೀಡಿದ್ದಾರೆ. ಭಯೋತ್ಪಾದಕರಿಗೆ ಸಿಗುವ ಶಿಕ್ಷೆ ಅವರು ಊಹಿಸಲೂ ಸಾಧ್ಯವಿಲ್ಲ ಎಂದು ಮೋದಿ ಗುಡುಗಿದ್ದಾರೆ.

Written by - Chetana Devarmani | Last Updated : Apr 24, 2025, 03:47 PM IST
  • ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ
  • ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಶಿಕ್ಷೆ ವಿಧಿಸಲಾಗುವುದು
  • ಪ್ರಧಾನಿ ನರೇಂದ್ರ ಮೋದಿ ಹೇಳಿಕೆ
ಭಯೋತ್ಪಾದಕರನ್ನು ಬೇಟೆಯಾಡದೇ ಬಿಡುವ ಮಾತೇ ಇಲ್ಲ, ಮಣ್ಣಿನಲ್ಲಿ ಹೂತು ಹಾಕುತ್ತೇವೆ : ಉಗ್ರರ ವಿರುದ್ಧ ತೊಡೆ ತಟ್ಟಿ ಗುಡುಗಿದ ಪ್ರಧಾನಿ ನರೇಂದ್ರ ಮೋದಿ

PM Modi Speech About Pahalgam Terrorist Attack: ಪಹಲ್ಗಾಮ್‌ನಲ್ಲಿ ಮುಗ್ಧ ನಾಗರಿಕರ ರಕ್ತವನ್ನು ಸುರಿಸಿದ ಪ್ರತಿಯೊಬ್ಬ ಭಯೋತ್ಪಾದಕನಿಗೂ ಶಿಕ್ಷೆಯಾಗುತ್ತದೆ. ಅವನು ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ ಶಿಕ್ಷೆ ವಿಧಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಇಂದು ಬಿಹಾರದಲ್ಲಿ ಘರ್ಜಿಸಿದ್ದಾರೆ.

Add Zee News as a Preferred Source

ಪ್ರಧಾನಿ ಮೋದಿ ಪಾಕಿಸ್ತಾನಕ್ಕೆ ಹಿಂದಿಯಲ್ಲಿ ಮತ್ತು ಜಗತ್ತಿಗೆ ಇಂಗ್ಲಿಷ್‌ನಲ್ಲಿ ಸಂದೇಶ ನೀಡಿದ್ದಾರೆ. ಈ ಭಯೋತ್ಪಾದಕ ದಾಳಿಯಲ್ಲಿ ಯಾರೋ ಒಬ್ಬರು ತಮ್ಮ ಮಗನನ್ನು ಕಳೆದುಕೊಂಡಿದ್ದಾರೆ, ಯಾರೋ ಒಬ್ಬರು ತಮ್ಮ ಸ್ನೇಹಿತನನ್ನು ಕಳೆದುಕೊಂಡಿದ್ದಾರೆ, ಅವರಲ್ಲಿ ಕೆಲವರು ಬಂಗಾಳಿಗಳು, ಕೆಲವರು ಮರಾಠಿಗಳು, ಕೆಲವರು ಒರಿಯಾದವರು, ಕೆಲವರು ಬಿಹಾರದವರು ಎಂದು ಮೋದಿ ಹೇಳಿದರು. 

ನಮ್ಮ ಕೋಪವೂ ಅದೇ. ಈ ದಾಳಿ ನಿರಾಯುಧ ಪ್ರವಾಸಿಗರ ಮೇಲೆ ಮಾತ್ರ ನಡೆದಿಲ್ಲ... ಅದು ಭಾರತದ ಆತ್ಮದ ಮೇಲೆ ನಡೆದ ದಾಳಿ ಆಗಿದೆ. ನಾನು ಅದನ್ನು ಬಹಳ ಸ್ಪಷ್ಟವಾದ ಮಾತುಗಳಲ್ಲಿ ಹೇಳಲು ಬಯಸುತ್ತೇನೆ. ಈ ದಾಳಿಯನ್ನು ನಡೆಸಿದ ಭಯೋತ್ಪಾದಕರು ಮತ್ತು ಈ ದಾಳಿಯ ಸಂಚು ರೂಪಿಸಿದವರಿಗೆ ಅವರು ಊಹಿಸಿರುವುದಕ್ಕಿಂತಲೂ ದೊಡ್ಡ ಶಿಕ್ಷೆ ಸಿಗಲಿದೆ. ಶಿಕ್ಷೆಯನ್ನು ಒಟ್ಟಿಗೆ ನೀಡಲಾಗುವುದು. ಭಯೋತ್ಪಾದಕರ ಹುಟ್ಟಡಗಿಸುವ ಸಮಯ ಬಂದಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. 

ಇದನ್ನೂ ಓದಿ: ಪಹಲ್ಗಾಮ್ ದಾಳಿ, ಗಡಿಯುದ್ದಕ್ಕೂ ಹೈ ಅಲರ್ಟ್‌ : ಕಾಶ್ಮೀರ ಕಣಿವೆಯಲ್ಲಿ ಬೃಹತ್ ಕಾರ್ಯಾಚರಣೆ

ಭಾರತದ ತಾಳ್ಮೆ ಕಟ್ಟೆಯೊಡೆದಿದೆ. ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಸಮಯ ಬಂದಿದೆ. 140 ಕೋಟಿ ಭಾರತೀಯರ ಇಚ್ಛಾಶಕ್ತಿ ಭಯೋತ್ಪಾದಕರ ಬೆನ್ನು ಮುರಿಯುತ್ತದೆ. ನಾನು ಇಡೀ ಜಗತ್ತಿಗೆ ಹೇಳುತ್ತೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಗುರುತಿಸುತ್ತದೆ, ಪತ್ತೆ ಹಚ್ಚುತ್ತದೆ ಮತ್ತು ಶಿಕ್ಷಿಸುತ್ತದೆ ಎಂದು ಮೋದಿ ಇಂಗ್ಲಿಷ್‌ನಲ್ಲಿ ಇಡೀ ಜಗತ್ತಿಗೆ ಬಹುದೊಡ್ಡ ಸಂದೇಶ ರವಾನಿಸಿದ್ದಾರೆ. 

ನಾವು ಅವರನ್ನು ಭೂಮಿಯ ತುತ್ತ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಯೋತ್ಪಾದನೆಯಿಂದ ಭಾರತದ ಚೈತನ್ಯ ಎಂದಿಗೂ ಮುರಿಯಲು ಸಾಧ್ಯವಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಬಿಡುವುದಿಲ್ಲ. ನ್ಯಾಯ ದೊರಕುವಂತೆ ನೋಡಿಕೊಳ್ಳಲು ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು. ಈ ಸಂಕಲ್ಪದಲ್ಲಿ ಇಡೀ ರಾಷ್ಟ್ರವು ಒಂದಾಗಿದೆ. ಮಾನವೀಯತೆಯಲ್ಲಿ ನಂಬಿಕೆ ಇರುವ ಎಲ್ಲರೂ ನಮ್ಮೊಂದಿಗಿದ್ದಾರೆ. ನಮ್ಮೊಂದಿಗೆ ನಿಂತ ವಿವಿಧ ದೇಶಗಳ ಜನರು ಮತ್ತು ಅವರ ನಾಯಕರಿಗೆ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ. 

ಇದನ್ನೂ ಓದಿ: ಭಾರತ ಈ ಸಾವುಗಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತದೆ : ಸಿಎಂ ಯೋಗಿ ಆದಿತ್ಯನಾಥ್‌

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Chetana Devarmani

" ಚೇತನಾ ದೇವರಮನಿ ಅವರು ಪ್ರಸ್ತುತ ʻಜೀ ಕನ್ನಡ ನ್ಯೂಸ್‌ʼ ವೆಬ್‌ನಲ್ಲಿ Senior Sub Editor ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಚೇತನಾ ದೇವರಮನಿ ಅವರು ಅನುಭವಿ ಪತ್ರಕರ್ತರಾಗಿದ್ದು, ಮಾಧ್ಯಮ ಕ್ಷೇತ್ರದಲ್ಲಿ 7 ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಅವರು ಸಿನಿಮಾ, ಕ್ರೈಂ, ಆರೋಗ್ಯ, ಬ್ಯುಸಿನೆಸ್, ಆಧ್ಯಾತ್ಮಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. 2018ರಲ್ಲಿ ʻರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಬಳಿಕ 2021 ರಲ್ಲಿ ʻಇಂಡಿಯಾ ಡಾಟ್‌ ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ ತಂಡ ಸೇರಿದರು. ...Read More

Trending News