Ayodhya Airport inauguration: ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ಜನವರಿ 22 ರಂದು ರಾಮನ ಪ್ರಾಣ ಪ್ರತಿಷ್ಠಾಪನೆ ಅದ್ಧೂರಿಯಾಗಿ ನಡೆಯಲಿದೆ. ಈ ಮಧ್ಯೆ, ಅಯೋಧ್ಯಾ ನಗರವು ಮದುವಣಗಿತ್ತಿಯಂತೆ ಸಜ್ಜುಗೊಳ್ಳುತ್ತಿದೆ. ಆಧುನಿಕ ರೈಲು ನಿಲ್ದಾಣ ಮತ್ತು ಹೊಸ ವಿಮಾನ ನಿಲ್ದಾಣ ಅಯೋಧ್ಯೆಯತ್ತ ಜನರನ್ನು ಕರೆತರಲು ಸಿದ್ಧವಾಗಿವೆ. 


COMMERCIAL BREAK
SCROLL TO CONTINUE READING

ಹೊಸ ವರ್ಷದ ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿವೆ. ದೇಶ ವಿದೇಶಗಳಿಂದ ಲಕ್ಷಾಂತರ ಭಕ್ತರು ಹಾಗೂ ವಿವಿಐಪಿಗಳು ಆಗಮಿಸಲಿದ್ದಾರೆ. ಈ ಹಿನ್ನೆಲೆ ಅಯೋಧ್ಯೆಯಲ್ಲಿ ಹೊಸ ಸೌಲಭ್ಯಗಳನ್ನು ಸಹ ಮಾಡಲಾಗಿದೆ. ಅಯೋಧ್ಯೆಯನ್ನು ವಿಶ್ವ ಭೂಪಟದೊಂದಿಗೆ ಸಂಪರ್ಕಿಸಲು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗಿದೆ. ಮತ್ತೊಂದೆಡೆ ರೈಲು ನಿಲ್ದಾಣವನ್ನು ಆಧುನೀಕರಣಗೊಳಿಸಲಾಗಿದೆ. ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. 


ಇದನ್ನೂ ಓದಿ : ರಾಮಮಂದಿರಕ್ಕೆ 613 ಕೆ.ಜಿ ತೂಕದ ಗಂಟೆ ಸಮರ್ಪಿಸಿದ ಕನ್ನಿಮೋಳಿ ಕುಟುಂಬ 


ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಹೆಸರಿಡಲಾಗಿದೆ. ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಯೋಧ್ಯಾ ಧಾಮ್ ಎಂದು ಹೆಸರಿಸಲಾಯಿತು. ಇಂಡಿಗೋ ಏರ್‌ಲೈನ್ಸ್ ಮತ್ತು ಏರ್ ಇಂಡಿಯಾ ವಿಮಾನಗಳು ಇಂದಿನಿಂದ ಕಾರ್ಯನಿರ್ವಹಿಸಲಿವೆ. ಈ ಎರಡು ಕಂಪನಿಗಳು ಈಗಾಗಲೇ ದೆಹಲಿ, ಮುಂಬೈ ಮತ್ತು ಅಹಮದಾಬಾದ್‌ನಿಂದ ಅಯೋಧ್ಯೆಗೆ ವಿಮಾನಯಾನ ಆರಂಭಿಸಿವೆ. ಪ್ರಧಾನಿ ಮೋದಿ ಮಧ್ಯಾಹ್ನ 12.15ಕ್ಕೆ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ.


ಅದಕ್ಕೂ ಮುನ್ನ ಸಂಪೂರ್ಣ ಸೌಲಭ್ಯಗಳೊಂದಿಗೆ ಆಧುನೀಕರಿಸಿದ ಅಯೋಧ್ಯೆ ರೈಲು ನಿಲ್ದಾಣವನ್ನು ಮೋದಿ ಉದ್ಘಾಟಿಸಲಿದ್ದಾರೆ. ಅಮೃತ್ ಭಾರತ್ ರೈಲುಗಳು ಮತ್ತು 6 ವಂದೇ ಭಾರತ್ ರೈಲುಗಳಿಗೆ ಸಹ ಇಂದು ಚಾಲನೆ ನೀಡುವರು. 


ನಂತರ ರಾಜ್ಯದಲ್ಲಿ ಕೈಗೊಂಡಿರುವ 15,700 ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನಡೆಯಲಿದೆ. ಇದರಲ್ಲಿ ಅಯೋಧ್ಯೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ 11 ಸಾವಿರದ 100 ಕೋಟಿ ವೆಚ್ಚದ ಯೋಜನೆಗಳಿವೆ. ಇದಲ್ಲದೇ ಇಂದು ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆಯಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  


ಇದನ್ನೂ ಓದಿ : ದೇಶದಲ್ಲಿ ಇನ್ನುಂದೆ ಮೋದಿ ಔಷಧಿ ಕೆಲಸ ಮಾಡುವುದಿಲ್ಲ: ರೇವಂತ್ ರೆಡ್ಡಿ ವ್ಯಂಗ್ಯ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.