ಬನ್ನಿ ಭಾರತೀಯರೇ "ನಾವು ಸಿದ್ಧರಿದ್ದೇವೆ".. ನಮಗೂ ಸಾಮರ್ಥ್ಯವಿದೆ..! ಪಾಕಿಸ್ತಾನ ಪ್ರಧಾನಿ ಘೋಷಣೆ

Pahalgam Attack : ಪಹಲ್ಗಾಮ್ ದಾಳಿ ಕುರಿತು ಭಾರತ ಸಾಕಷ್ಟು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡ ಬೆನ್ನಲ್ಲೇ ಇದೀಗ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿಕೆ ನೀಡಿದ್ದಾರೆ.. ಪಾಕಿಸ್ತಾನ ಯಾವಾಗಲೂ ಭಯೋತ್ಪಾದನೆಯನ್ನು ಖಂಡಿಸಿದೆ ಮತ್ತು ಭಯೋತ್ಪಾದನೆಯ ವಿರುದ್ಧ ಹೋರಾಡಲು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿದೆ ಎಂದು ತಿಳಿಸಿದ್ದಾರೆ..

Written by - Krishna N K | Last Updated : Apr 26, 2025, 01:34 PM IST
    • ಪಹಲ್ಗಾಮ್ ದಾಳಿ ಕುರಿತು ಭಾರತ ಸಾಕಷ್ಟು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದೆ.
    • ಭಯೋತ್ಪಾದನೆಯ ವಿರುದ್ಧ ಹೋರಾಡಲು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿದೆ
    • ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಸಿದ್ಧ
ಬನ್ನಿ ಭಾರತೀಯರೇ "ನಾವು ಸಿದ್ಧರಿದ್ದೇವೆ".. ನಮಗೂ ಸಾಮರ್ಥ್ಯವಿದೆ..! ಪಾಕಿಸ್ತಾನ ಪ್ರಧಾನಿ ಘೋಷಣೆ

ಪಾಕಿಸ್ತಾನ : ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಸಿದ್ಧ ಎಂದು ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತ ಪಾಕಿಸ್ತಾನದ ವಿರುದ್ಧ ಆಕ್ರಮಣಕಾರಿ ಕ್ರಮ ಕೈಗೊಳ್ಳುತ್ತಿರುವುದರಿಂದ ನಿಷ್ಪಕ್ಷಪಾತ ತನಿಖೆಗೆ ಸಿದ್ಧ ಎಂದು ಶೆಹಬಾಜ್ ಷರೀಫ್ ಹೇಳಿದ್ದಾರೆ. 

Add Zee News as a Preferred Source

ಏಪ್ರಿಲ್ 22, 2025 ರಂದು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದಾಗ 26 ಜನರು ಸಾವನ್ನಪ್ಪಿದರು. ಈ ಭಯೋತ್ಪಾದಕ ದಾಳಿಯು ಭಾರತ ಸೇರಿದಂತೆ ವಿಶ್ವದಾದ್ಯಂತ ಜನರ ಆಕ್ರೋಶಕ್ಕೆ ಕಾರಣವಾಯಿತು. ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಸಂಘಟನೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.

ಇದನ್ನೂ ಓದಿ:ಪಹಲ್ಗಾಮ್‌ ದಾಳಿ ಬೆನ್ನಲ್ಲೇ, ಭೀಕರ ಸ್ಫೋಟಕ್ಕೆ 10 ಜನ ಪಾಕಿಸ್ತಾನಿ ಸೈನಿಕರು ಬಲಿ...!

ಇದು ಪಾಕಿಸ್ತಾನದಿಂದ ಕಾರ್ಯನಿರ್ವಹಿಸುವ ಲಷ್ಕರ್-ಎ-ತೊಯ್ಬಾದ ಭಾಗವಾಗಿವೆ. ಆದ್ದರಿಂದ, ಭಾರತವು ಈ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಗಂಭೀರ ಕ್ರಮ ಕೈಗೊಳ್ಳುತ್ತಿದೆ. ಈ ದಾಳಿಯ ಹೊಣೆಯನ್ನು ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿದ್ದರೂ, ಇದರ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಆರೋಪಿಸಿದೆ.

ಪರಿಣಾಮವಾಗಿ, ಅದು ಪಾಕಿಸ್ತಾನದ ವಿರುದ್ಧ ಆಕ್ರಮಣಕಾರಿ ಕ್ರಮ ಕೈಗೊಳ್ಳುತ್ತಿದೆ. ನಿರ್ದಿಷ್ಟವಾಗಿ ಹೇಳುವುದಾದರೆ, ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸುವುದು, ವಾಘಾ ಗಡಿಯನ್ನು ಮುಚ್ಚುವುದು, ಪಾಕಿಸ್ತಾನಿ ವೀಸಾಗಳನ್ನು ರದ್ದುಗೊಳಿಸುವುದು, ಪಾಕಿಸ್ತಾನಿಗಳು ಹೊರಹೋಗುವಂತೆ ಆದೇಶಿಸುವುದು ಮತ್ತು ರಾಜತಾಂತ್ರಿಕ ಭದ್ರತೆಯನ್ನು ಹಿಂತೆಗೆದುಕೊಳ್ಳುವುದು ಮುಂತಾದ ಕಠಿಣ ಕ್ರಮಗಳನ್ನು ತೆಗೆದುಕೊಂಡಿತು.

ಇದನ್ನೂ ಓದಿ:Pahalgam Attack: 1960ರ ಸಿಂಧೂ ಜಲ ಒಪ್ಪಂದ ಸ್ಥಗಿತವನ್ನು ಯುದ್ಧ ಘೋಷಣೆ ಎಂದ ಪಾಕಿಸ್ತಾನಕ್ಕೆ ಭಾರತದ ತಿರುಗೇಟು

ಪಹಲ್ಗಾಮ್ ದಾಳಿಯ ಕುರಿತು ಪ್ರಧಾನಿ ಶೆಹಬಾಜ್ ಷರೀಫ್, "ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಆರೋಪ ಹೊರಿಸುವ ಆಟ ಸರಿಯಲ್ಲ. ನಮ್ಮ ಮೇಲೆ ಮಾನಹಾನಿ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಪಾಕಿಸ್ತಾನ ಯಾವಾಗಲೂ ಭಯೋತ್ಪಾದನೆಯನ್ನು ಖಂಡಿಸಿದೆ ಮತ್ತು ಭಯೋತ್ಪಾದನೆಯ ವಿರುದ್ಧ ಹೋರಾಡಲು ಲೆಕ್ಕವಿಲ್ಲದಷ್ಟು ತ್ಯಾಗಗಳನ್ನು ಮಾಡಿದೆ ಎಂದು ಹೇಳಿದ್ದಾರೆ.

ಪಹಲ್ಗಾಮ್ ದಾಳಿಯ ಬಗ್ಗೆ ಯಾವುದೇ ನಿಷ್ಪಕ್ಷಪಾತ, ಪಾರದರ್ಶಕ ಮತ್ತು ವಿಶ್ವಾಸಾರ್ಹ ತನಿಖೆಯಲ್ಲಿ ಭಾಗವಹಿಸಲು ಪಾಕಿಸ್ತಾನ ಸಿದ್ಧವಾಗಿದೆ. ನಮ್ಮ ಸೈನ್ಯ ಯುದ್ಧಕ್ಕೆ ಸಿದ್ಧವಾಗಿದೆ. ಯಾವುದೇ ಪರಿಸ್ಥಿತಿಯನ್ನು ನಿಭಾಯಿಸುವ ಸಾಮರ್ಥ್ಯ ನಮಗಿದೆ.. ಆದರೆ, ಶಾಂತಿ ನಮ್ಮ ಆದ್ಯತೆ. ಆದರೆ ಯಾರೂ ಅದನ್ನು ನಮ್ಮ ದೌರ್ಬಲ್ಯವೆಂದು ಪರಿಗಣಿಸಬಾರದು. ಭದ್ರತೆಯ ವಿಷಯದಲ್ಲಿ ನಾವು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

...Read More

Trending News