ಬೆಂಗಳೂರು: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ  ತತ್ವಗಳೇ ಸಂವಿಧಾನದ ತಳಹದಿ.ಈ ಸಿದ್ಧಾಂತಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಭಾರತ ಸಂವಿಧಾನ ಹಾಗೂ ಅಂತಾರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.


ಭಾರತದ ಸಂವಿಧಾನ ಜಾರಿಗೆ ಬಂದು 75ನೇ ವರ್ಷಕ್ಕೆ ಕಾಲಿಟ್ಟಿದೆ. 75ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿನಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. 


ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಶುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್, ಪ್ರೊ, ಕಾಂಚಾ, ಪ್ರಶಾಂತ್ ಭೂಷಣ್, ಬಿಜುವಾಡ ವಿಲ್ಸನ್, ಮೇಧಾ ಪಾಟ್ಕರ್ ಮುಂತಾದ ಅನೇಕ ಚಿಂತಕರು ಮೇಧಾವಿಗಳು ಈ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ. ದೇಶದ ಸಮಸ್ಯೆಗಳು, ಜನರ ಬವಣೆಗಳು, ಸಂವಿಧಾನದಲ್ಲಿ ಅದಕ್ಕೆ ಪರಿಹಾರಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. 24 ರಂದು ಉದ್ಘಾಟನೆ ನಡೆದು 25 ರಂದು ಬೃಹತ್ ರ‌್ಯಾಲಿ ನಡೆಯಲಿದೆ. 


ಇದನ್ನೂ ಓದಿ-ದಕ್ಷಿಣ ಸಿನಿರಂಗಕ್ಕೆ ಎಂಟ್ರಿಕೊಟ್ಟ ಬಾಲಿವುಡ್ ಸ್ಟಾರ್: ಗೂಢಾಚಾರಿ-2 ತಂಡ ಸೇರಿದ ಇಮ್ರಾನ್ ಹಶ್ಮಿ


ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ರಚನೆಯಾದ ನಂತರ ಮೊದಲನೇ ಬಾರಿಗೆ ಬಜೆಟ್ ಪುಸ್ತಕದ ಮುಖಪುಟದಲ್ಲಿ ಪೀಠಿಕೆಯನ್ನು ಮುದ್ರಿಸಲಾಗಿದೆ.ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಯಬೇಕು. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮಂತ್ರಗಳನ್ನು ನೀಡಿದ್ದಾರೆ. ಹೋರಾಟ ಇಲ್ಲದೆ ಸಂವಿಧಾನದಲ್ಲಿ  ಹೇಳಿರುವ ಅನೇಕ ಹಕ್ಕುಗಳು ನಮಗೆ ದಕ್ಕುತ್ತಿರಲಿಲ್ಲ. ಸ್ವಾತಂತ್ರ್ಯ ಬಂದು 77 ವರ್ಷಗಳಾಯಿತು. ಸಂವಿಧಾನ ಜಾರಿಯಾಗಿ 75 ನೇ ವರ್ಷವಾದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ ಎಂದರು.ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ ʻಜನʼ ಚಿತ್ರಕ್ಕೆ ಚಾಲನೆ


ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ ಇದ್ದರೆ, ಯಾರು ನಮ್ಮನ್ನು ದಾರಿತಪ್ಪಿಸಲು ಸಾಧ್ಯವಿಲ್ಲ. ಸುಮಾರು 78% ರಷ್ಟು ಜನರು ಶಿಕ್ಷಣ ಪಡೆದಿದ್ದಾರೆ. ವಿದ್ಯಾವಂತರು ಇಂದಿಗೂ ಮೌಢ್ಯ ಕಂದಾಚಾರವನ್ನು ನಂಬುತ್ತಿದ್ದಾರೆ. ನಮ್ಮಲ್ಲಿ ವೈಚಾರಿಕತೆಯ ಬಗ್ಗೆ ಜ್ಞಾನವಿಲ್ಲ. ಸರಿತಪ್ಪುಗಳ ಬಗ್ಗೆ ಅರಿಯಲೆಂದೇ ಶಿಕ್ಷಣ ಪಡೆಯುವುದು ಎಂದು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.