ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಕಿಡಿ

ಮಹಿಳೆಯರ ಮೇಲಿನ ಅಪರಾಧದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಈ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಪ್ಹೇರಿಯಾಂಕಾ ಗಾಂಧಿ ಹೇಳಿದ್ದಾರೆ.

Last Updated : Oct 22, 2019, 05:25 PM IST
ಮಹಿಳೆಯರ ಮೇಲಿನ ಅಪರಾಧಗಳಲ್ಲಿ ಹೆಚ್ಚಳ: ಯೋಗಿ ಸರ್ಕಾರದ ವಿರುದ್ಧ ಪ್ರಿಯಾಂಕಾ ಕಿಡಿ title=

ರಾಯ್‌ಬರೇಲಿ: ಉತ್ತರಪ್ರದೇಶದಲ್ಲಿ ಮಹಿಳೆಯರ ಮೇಲಿನ ಅಪರಾಧಗಳು ಹೆಚ್ಚುತ್ತಿರುವ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಪ್ರಿಯಾಂಕಾ, "ಮಹಿಳೆಯರ ಮೇಲಿನ ಅಪರಾಧದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಇದು ತುಂಬಾ ನಾಚಿಕೆಗೇಡಿನ ಸಂಗತಿ. ರಾಜ್ಯ ಸರ್ಕಾರ ಈ ಶೀಘ್ರ ಕ್ರಮ ಕೈಗೊಳ್ಳಬೇಕು" ಎಂದು ಹೇಳಿದರು.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಸೋಮವಾರ ಬಿಡುಗಡೆ ಮಾಡಿದ 2017 ರ ವರದಿಯನ್ನು ಉಲ್ಲೇಖಿಸಿ ಮಾತನಾಡಿದ ಪ್ರಿಯಾಂಕ, ಉತ್ತರಪ್ರದೇಶದಲ್ಲಿ ಮಹಿಳೆಯರ ವಿರುದ್ಧ 3.5 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಅಪರಾಧಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ. ಅದರಲ್ಲಿ ಗರಿಷ್ಠ ಪ್ರಕರಣಗಳು ದೇಶದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾದ ಉತ್ತರ ಪ್ರದೇಶದಲ್ಲಿ (56,011) ದಾಖಲಾಗಿದೆ ಎಂದು ಹೇಳಿದರು.

Trending News