Priyanka Gandhi: ಭಯಂಕರ ಕತ್ತಲೆ... ಮೈಕ್ ಇಲ್ಲ - ವೈರಲ್ ಆದ ಪ್ರಿಯಾಂಕಾ ಗಾಂಧಿ ಆಕ್ಷನ್ ಕ್ಯಾಂಪೇನ್!
Priyanka Gandhi Viral Video: ಪ್ರಿಯಾಂಕಾ ಗಾಂಧಿ ಮೈಕ್ ಇಲ್ಲದೆ, ಕತ್ತಲೆಯಲ್ಲಿ ಜನರ ಮೊಬೈಲ್ ಟಾರ್ಚ್ಗಳ ಬೆಳಕಿನಲ್ಲಿ ಪ್ರಚಾರ ಮಾಡುತ್ತಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
Priyanka Gandhi Campaign Video: ಲೋಕಸಭೆ ಚುನಾವಣೆ 2024 ಕ್ಕೆ ದೇಶದಾದ್ಯಂತ 543 ಕ್ಷೇತ್ರಗಳಲ್ಲಿ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಏಪ್ರಿಲ್ 19ರಂದು ನಡೆದ ಮೊದಲ ಹಂತದ ಚುನಾವಣೆಯಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆದಿತ್ತು. ಏಪ್ರಿಲ್ 26ರಂದು ನಡೆದ ಎರಡನೇ ಹಂತದ ಚುನಾವಣೆಯಲ್ಲಿ 88 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಮೂರನೇ ಹಂತದ ಚುನಾವಣೆಯಲ್ಲಿ 10 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮೇ 07 ರಂದು ಮತದಾನ ನಡೆಯಿತು. ಇದುವರೆಗೆ 280 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚುನಾವಣಾ ಮತದಾನ ನಡೆದಿದೆ. ಇನ್ನು ನಾಲ್ಕು ಹಂತಗಳು ಬಾಕಿ ಇವೆ. ಮೇ 13ರಂದು ನಾಲ್ಕನೇ ಹಂತದ ಮತದಾನ ನಡೆಯಲಿದೆ.
ಈ ನಾಲ್ಕನೇ ಹಂತದ ಮತದಾನ ಬಹುತೇಕ ದಕ್ಷಿಣ ರಾಜ್ಯಗಳಲ್ಲಿ ನಡೆಯುತ್ತಿದೆ. ಆಂಧ್ರಪ್ರದೇಶದ ಒಟ್ಟು 25 ಕ್ಷೇತ್ರಗಳು ಮತ್ತು ತೆಲಂಗಾಣದ 17 ಕ್ಷೇತ್ರಗಳಿಗೆ ಮೇ 13 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 13 ಕ್ಷೇತ್ರಗಳು, ಮಹಾರಾಷ್ಟ್ರದ 11 ಕ್ಷೇತ್ರಗಳು, ಪಶ್ಚಿಮ ಬಂಗಾಳದ 8 ಕ್ಷೇತ್ರಗಳು, ಮಧ್ಯಪ್ರದೇಶದ 8 ಕ್ಷೇತ್ರಗಳು, ಬಿಹಾರ ಮತ್ತು ಜಾರ್ಖಂಡ್ ರಾಜ್ಯಗಳ ತಲಾ 5 ಕ್ಷೇತ್ರಗಳು, ಒಡಿಶಾದ 4 ಕ್ಷೇತ್ರಗಳು, ಜಮ್ಮು ಮತ್ತು ಕಾಶ್ಮೀರದ 1 ಕ್ಷೇತ್ರ ಸೇರಿ ಒಟ್ಟು 96 ಕ್ಷೇತ್ರಗಳು 10 ರಾಜ್ಯಗಳಲ್ಲಿ ಮೇ 13 ರಂದು ಮತದಾನ ನಡೆಯಲಿದೆ.
ಇದನ್ನೂ ಓದಿ: ರಾಮಮಂದಿರಕ್ಕೆ ಕಾಂಗ್ರೆಸ್ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ: ನರೇಂದ್ರ ಮೋದಿ
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಬಿರುಸಿನ ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಅದರಲ್ಲೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಕೂಡ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಕೇರಳದ ವಯನಾಡ್ ಕ್ಷೇತ್ರದಿಂದ ಸ್ಪರ್ಧಿಸಿದ್ದು, ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದಲೂ ಕಣಕ್ಕಿಳಿದಿದ್ದಾರೆ. ಈ ಹಿಂದೆ ಅವರು ಕಳೆದ ಚುನಾವಣೆಯಲ್ಲಿ ಸೋತಿದ್ದ ಅಮೇಥಿಯಿಂದ ಮರು ಸ್ಪರ್ಧಿಸುವ ನಿರೀಕ್ಷೆ ಇತ್ತು. ಆದರೆ ಅವರು ರಾಯ್‌ಬರೇಲಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡರು.
ಪ್ರಿಯಾಂಕಾ ಗಾಂಧಿ ಭರ್ಜರಿ ಪ್ರಚಾರ
ಈ ವೇಳೆ ರಾಹುಲ್ ಗಾಂಧಿ ಸೋದರಿ ಪ್ರಿಯಾಂಕಾ ಗಾಂಧಿ ಸಹ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಹಗಲು ರಾತ್ರಿ ಎನ್ನದೇ ಬೀದಿ ಬೀದಿಯಲ್ಲಿ ಸಭೆಗಳಲ್ಲಿ ಭಾಗವಹಿಸುತ್ತಲೇ ಇದ್ದಾರೆ. ಜನರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾರೆ.
ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್ ಪಿತ್ರೋಡಾ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.