ಪ್ರಿಯಾಂಕ ರೋಡ್ ಶೋ ವೇಳೆ ಮಹಿಳಾ ಕಾನ್ಸ್ಟೇಬಲ್ ಕಾಲ ಮೇಲೆ ಹರಿದ ಕಾರು, ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಗೆ ಗಾಯಗೊಂಡ ಮಹಿಳೆಯ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಜವಾಬ್ದಾರಿಯನ್ನು ಪ್ರಿಯಾಂಕ ಗಾಂಧಿ ವಹಿಸಿದ್ದು, ಕ್ಷಣ ಕ್ಷಣಕ್ಕೂ ಆಕೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ.

Last Updated : Apr 26, 2019, 12:19 PM IST
ಪ್ರಿಯಾಂಕ ರೋಡ್ ಶೋ ವೇಳೆ ಮಹಿಳಾ ಕಾನ್ಸ್ಟೇಬಲ್ ಕಾಲ ಮೇಲೆ ಹರಿದ ಕಾರು, ಆಸ್ಪತ್ರೆಗೆ ದಾಖಲು title=
File Image

ಮಹೋಬ: ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಬುಧವಾರ(ಎಪ್ರಿಲ್ 24) ಪ್ರಿಯಾಂಕ ಗಾಂಧಿ ರೋಡ್ ಶೋ ವೇಳೆ ಮಹಿಳಾ ಪೊಲೀಸ್ ಪೇದೆ ಕಾಲ ಮೇಲೆ ಕಾರು ಹರಿದ ಪರಿಣಾಮ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳಾ ಪೊಲೀಸ್ ಪೇದೆ ಕಾಲ ಮೇಲೆ ಆರಿದ ಮುಂಭಾಗದ ಚಕ್ರ:
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರ ರೋಡ್ ಶೋ ಸಂದರ್ಭದಲ್ಲಿ ಸಿಬ್ಬಂದಿ ಪರಮಾನಂದ ಚೌಕ್ ಬಳಿ ವಾಹನ ಸಾಗುವ ವೇಳೆ ಮಹಿಳಾ ಕಾನ್ಸ್ಟೇಬಲ್ ಖುಸುಮು ಬಾನು ಅವರ ಕಾಲ ಮೇಲೆ ಕಾರಿನ ಮುಂಭಾಗದ ಚಕ್ರ ಹರಿದಿದ್ದು, ಅವರ ಕಾಲಿಗೆ ಗಂಭೀರವಾಗಿ ಪೆಟ್ಟಾಗಿದೆ ಎಂದು ಪೊಲೀಸ್ ಪ್ರಾದೇಶಿಕ ಅಧಿಕಾರಿ (ಸಿಟಿ) ಜತಶಂಕರ್ ರಾವ್ ಹೇಳಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಮಹಿಳಾ ಕಾನ್ಸ್ಟೇಬಲ್ ಗೆ ಚಿಕಿತ್ಸೆ:
ಗಾಯಗೊಂಡ ಮಹಿಳಾ  ಕಾನ್ಸ್ಟೇಬಲ್ ರನ್ನು ಇತರ ಪೊಲೀಸ್ ಸಿಬ್ಬಂದಿ ಚಿಕಿತ್ಸೆಗಾಗಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾವ್ ತಿಳಿಸಿದ್ದಾರೆ.

ಏತನ್ಮಧ್ಯೆ, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆಗೆ ಗಾಯಗೊಂಡ ಮಹಿಳೆಯ ಚಿಕಿತ್ಸೆ ಮತ್ತು ಮೇಲ್ವಿಚಾರಣೆ ಜವಾಬ್ದಾರಿಯನ್ನು ಪ್ರಿಯಾಂಕ ಗಾಂಧಿ ವಹಿಸಿದ್ದು, ಕ್ಷಣ ಕ್ಷಣಕ್ಕೂ ಆಕೆಯ ಆರೋಗ್ಯದ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

Trending News