ಅಧಿಕೃತವಾಗಿ ಟ್ವಿಟ್ಟರ್ ಗೆ ಎಂಟ್ರಿ ನೀಡಿದ ಪ್ರಿಯಾಂಕಾ ಗಾಂಧಿ ವಾದ್ರಾ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟ್ರಂಪ್ ಕಾರ್ಡ್ ಆಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚಿಗೆ ನೇಮಕ ಮಾಡಿತ್ತು. ಆ ಮೂಲಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಈಗ ಹೆಚ್ಚಿನ ಸ್ಥಾನಗಳನ್ನು ಗಳಿಸುವತ್ತ ಚಿಂತನೆ ನಡೆಸಿದೆ.
ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಟ್ರಂಪ್ ಕಾರ್ಡ್ ಆಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷವು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಇತ್ತೀಚಿಗೆ ನೇಮಕ ಮಾಡಿತ್ತು. ಆ ಮೂಲಕ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಈಗ ಹೆಚ್ಚಿನ ಸ್ಥಾನಗಳನ್ನು ಗಳಿಸುವತ್ತ ಚಿಂತನೆ ನಡೆಸಿದೆ.
ಸಾಮಾಜಿಕ ಜಾಲತಾಣಗಳ ಮೂಲಕ ಇಂದು ಪಕ್ಷದ ಕಾರ್ಯಕರ್ತರನ್ನು ತಲುಪುವ ನಿಟ್ಟಿನಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರದಂದು ಟ್ವಿಟ್ಟರ್ ಗೆ ಪ್ರವೇಶಿಸಿದ್ದಾರೆ.ಈ ಕುರಿತಾಗಿ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆ "ಪ್ರಿಯಾಂಕಾ ಗಾಂಧಿ ವಾದ್ರಾ ಟ್ವಿಟ್ಟರ್ ಗೆ ಪ್ರವೇಶಿಸಿದ್ದಾರೆ. ಅವರನ್ನು @priyankagandhi ಖಾತೆ ಮೂಲಕ ಫಾಲೋ ಮಾಡಬಹುದು ಎಂದು ತಿಳಿಸಿದೆ.
ಪ್ರಿಯಾಂಕಾ ಗಾಂಧಿ ಟ್ವಿಟ್ಟರ್ ಆಗಮನಕ್ಕೆ ಶಶಿ ತರೂರ್ ಸೇರಿದಂತೆ ಹಲವಾರು ನಾಯಕರು ಸ್ವಾಗತಿಸಿದ್ದಾರೆ.ಇನ್ನೊಂದು ವಿಶೇಷವೆಂದರೆ ಕೇವಲ ಟ್ವಿಟ್ಟರ್ ಗೆ ಸೇರಿದ ಕೆಲವೇ ಗಂಟೆಗಳಲ್ಲಿ ಅವರನ್ನು 54 ಸಾವಿರ ಜನರು ಫಾಲೋ ಮಾಡಿದ್ದಾರೆ.