`ಉತ್ತರ ಪ್ರದೇಶದಲ್ಲಿ ನಾವು ಮೈತ್ರಿಮಾಡಿಕೊಳ್ಳಲು ಮುಕ್ತ ಮನಸ್ಸು ಹೊಂದಿದ್ದೇವೆ`
ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ತಮ್ಮ ಪಕ್ಷವು ಮುಕ್ತ ಮನಸ್ಸಿನಲ್ಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ.
ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ತಮ್ಮ ಪಕ್ಷವು ಮುಕ್ತ ಮನಸ್ಸಿನಲ್ಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ.
ಎಲ್ಲಾ 403 ವಿಧಾನಸಭಾ ಸ್ಥಾನಗಳಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುತ್ತದೆಯೇ ಅಥವಾ ಕೆಲವು ರಾಜಕೀಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ ಗಾಂಧೀ (Priyanka Gandhi Vadra)"ಇದು ಹೇಳಲು ತುಂಬಾ ಬೇಗವಾಗುತ್ತದೆ, ನಾನು ಮೈತ್ರಿ ಸಾಧ್ಯತೆಯನ್ನು ತಳ್ಳಿಹಾಕುವುದಿಲ್ಲ, ನಾವು ಸಂಪೂರ್ಣವಾಗಿ ಮುಚ್ಚಿದ ಮನಸ್ಸಿನವರಲ್ಲ, ನಾವು ಮುಕ್ತ ಮನಸ್ಸನ್ನು ಹೊಂದಿದ್ದೇವೆ" ಎಂದು ಹೇಳಿದರು.
ಇದನ್ನೂ ಓದಿ: ಸಂಪೂರ್ಣ ಲಸಿಕೆ ತೆಗೆದುಕೊಂಡರೂ ಬ್ರಿಟನ್ ಆರೋಗ್ಯ ಸಚಿವರಿಗೆ ಕೊರೊನಾ ಪಾಸಿಟಿವ್..!
'ಬಿಜೆಪಿಯನ್ನು ಸೋಲಿಸುವುದು ನಮ್ಮ ಉದ್ದೇಶ ಆದ್ದರಿಂದ ಇತರ ರಾಜಕೀಯ ಪಕ್ಷಗಳು ಸಹ ಮುಕ್ತ ಮನಸ್ಸನ್ನು ಹೊಂದಬೇಕು ಎಂದು ಹೇಳಿದರು. ಇದೆ ವೇಳೆ ತಮ್ಮ ಉಪಸ್ಥಿತಿ ಇದ್ದಾಗ ಕಾಂಗ್ರೆಸ್ ಪಕ್ಷವು ಶಕ್ತಿಯುತವಾಗಿರುತ್ತದೆ,ಆದರೆ ತಾವು ಹೊರಟ ನಂತರ ನಿಷ್ಕ್ರಿಯವಾಗುತ್ತದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕಾ , "ನಾನು ಇಲ್ಲಿಗೆ ಬಂದಾಗ, ಮಾಧ್ಯಮಗಳ ಗಮನವಿರುತ್ತದೆ.ಆದರೆ, ನಾನು ಯಾವಾಗ ಇಲ್ಲಿರಲ್ಲ, ನೀವು ಯಾವುದೇ ಗಮನವನ್ನು ನೀಡುವುದಿಲ್ಲ. ಆದರೆ ನಮ್ಮ ಕೆಲಸ ನಡೆಯುತ್ತಿದೆ. "ಎಂದು ಹೇಳಿದರು.
ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ಆಗ್ತಾರಾ ಪ್ರಿಯಾಂಕಾ ಗಾಂಧಿ..? ಇಲ್ಲಿದೆ ಮೆಗಾ ಪ್ಲಾನ್
"ನಾವು COVID-19 ಸಾಂಕ್ರಾಮಿಕ ಸಮಯದಲ್ಲಿ ಗರಿಷ್ಠ ಕೆಲಸವನ್ನು ಮಾಡಿದ್ದೇವೆ.ನಾವೇ ಸಮಸ್ಯೆಗಳನ್ನು ಎತ್ತಿರುವುದನ್ನು ನೀವು ನೋಡಬಹುದು. ಕಾಂಗ್ರೆಸ್ ಇನ್ನು ಮುಂದೆ ಹೂಮಾಲೆ ಛಾಯಾಚಿತ್ರಗಳಿಗೆ ಸೀಮಿತವಾಗಿಲ್ಲ. ನಮ್ಮ ಪಕ್ಷವು 30-32 ವರ್ಷಗಳಿಂದ ಅಧಿಕಾರದಿಂದ ಹೊರಗುಳಿದಿದೆ, ಮತ್ತು ಅದು ದುರ್ಬಲವಾಗಿದೆ. ಆದಾಗ್ಯೂ, ಪೂರ್ಣ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಮತ್ತು ಪಕ್ಷಕ್ಕೆ ಸಾಕಷ್ಟು ಶಕ್ತಿ ಬಂದಿದೆ "ಎಂದು ಅವರು ಹೇಳಿದರು.
ಇದನ್ನೂ ಓದಿ: Video: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಪೋಲಿಸ್ ಲಾಠಿಚಾರ್ಜ್ ನಿಂದ ರಕ್ಷಿಸಿದ ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸೇವಾ ದಳವನ್ನು ಪುನರುಜ್ಜೀವನಗೊಳಿಸುವ ಯೋಜನೆಗಳನ್ನು ರೂಪಿಸುತ್ತಿದ್ದಾರೆ ಎಂದು ಹೇಳಿದರು. ಇದೆ ವೇಳೆ ಅವರು ಯುಪಿ ಕಾಂಗ್ರೆಸ್ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು, ಉತ್ತರ ಪ್ರದೇಶದ ಸಹ-ಉಸ್ತುವಾರಿ ಧೀರಜ್ ಗುರ್ಜಾರ್, ಯುಪಿ ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ಮತ್ತು ನಸೀಮುದ್ದೀನ್ ಸಿದ್ದಿಕಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರೊಂದಿಗೆ ಸಂವಾದ ನಡೆಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.