ಎಸ್‌ಪಿ ಜೊತೆ ವಿಲೀನ ಇಲ್ಲ; 2022ರ ಬಳಿಕ ಪಿಎಸ್‌ಪಿ ಏಕಾಂಗಿಯಾಗಿ ಸರ್ಕಾರ ರಚಿಸಲಿದೆ: ಶಿವಪಾಲ್ ಯಾದವ್

ಪ್ರಗತಿಶೀಲ್ ಸಮಾಜವಾದಿ ಪಕ್ಷ (ಪಿಎಸ್ಪಿ) 2022 ರಲ್ಲಿ ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲಿದೆ ಎಂದು ಶಿವಪಾಲ್ ಸಿಂಗ್ ಯಾದವ್ ಶುಕ್ರವಾರ ಹೇಳಿದ್ದಾರೆ.

Updated: Jun 15, 2019 , 10:58 AM IST
ಎಸ್‌ಪಿ ಜೊತೆ ವಿಲೀನ ಇಲ್ಲ; 2022ರ ಬಳಿಕ ಪಿಎಸ್‌ಪಿ ಏಕಾಂಗಿಯಾಗಿ ಸರ್ಕಾರ ರಚಿಸಲಿದೆ: ಶಿವಪಾಲ್ ಯಾದವ್

ಲಕ್ನೋ: ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸಹೋದರ ಶಿವಪಾಲ್ ಸಿಂಗ್ ಯಾದವ್ ತಮ್ಮ ಪಕ್ಷ ಪ್ರಗತಿಶೀಲ್ ಸಮಾಜವಾದಿ ಪಕ್ಷ (ಪಿಎಸ್ಪಿ) 2022 ರಲ್ಲಿ ಉತ್ತರಪ್ರದೇಶದಲ್ಲಿ ಸರ್ಕಾರ ರಚಿಸಲಿದೆ ಎಂದು ಶುಕ್ರವಾರ ಹೇಳಿದ್ದಾರೆ.

"ನಾವು 2022 ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇವೆ. 2022 ರಲ್ಲಿ ನಮ್ಮ ಪಕ್ಷವು ಉತ್ತರಪ್ರದೇಶದಲ್ಲಿ ಸರ್ಕಾರವನ್ನುರಚಿಸಲಿದೆ" ಎಂದು ಶುಕ್ರವಾರ ತಮ್ಮ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೇಳಿದರು.

2022ರ ಹೊತ್ತಿಗೆ ಪ್ರಗತಿಶೀಲ್ ಸಮಾಜವಾದಿ ಪಕ್ಷವನ್ನು ಬಲಪಡಿಸುವ ಅಗತ್ಯವಿದೆ ಎಂದ ಶಿವಪಾಲ್ ಸಿಂಗ್ ಯಾದವ್, ಸಮಾಜವಾದಿ ಪಕ್ಷದೊಂದಿಗೆ ವಿಲೀನ ಇಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸಮಾಜವಾದಿ ಪಕ್ಷದೊಂದಿಗೆ ವಿಲೀನ ವಿಚಾರವಾಗಿ ಇದ್ದ ಎಲ್ಲಾ ಉಹಾಪೋಹಗಳಿಗೆ ತೆರೆ ಎಳೆದರು.