25,000 ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಪ್ರಸ್ತಾಪಕ್ಕೆ ಪಂಜಾಬ್ ಸರ್ಕಾರ ಗ್ರೀನ್ ಸಿಗ್ನಲ್
ಹೊಸದಾಗಿ ರಚನೆಯಾದ ಪಂಜಾಬ್ ಕ್ಯಾಬಿನೆಟ್ ಒಟ್ಟು 25,000 ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ.
ನವದೆಹಲಿ: ಹೊಸದಾಗಿ ರಚನೆಯಾದ ಪಂಜಾಬ್ ಕ್ಯಾಬಿನೆಟ್ ಒಟ್ಟು 25,000 ಸರ್ಕಾರಿ ಉದ್ಯೋಗಗಳನ್ನು ಒದಗಿಸುವ ಪ್ರಸ್ತಾಪವನ್ನು ಅಂಗೀಕರಿಸಿದೆ.
ರಾಜ್ಯದ ಪೊಲೀಸ್ ಇಲಾಖೆಯಲ್ಲಿ 10,000 ಖಾಲಿ ಹುದ್ದೆಗಳು ಮತ್ತು ಇತರ ಸರ್ಕಾರಿ ಇಲಾಖೆಗಳಲ್ಲಿ 15,000 ಖಾಲಿ ಹುದ್ದೆಗಳಿಗೆ ಶೀಘ್ರದಲ್ಲೇ ಚಾಲನೆ ನೀಡಲು ಅನುಮೋದನೆ ನೀಡಿದೆ.ಈ ಐತಿಹಾಸಿಕ ನಿರ್ಧಾರವು ಯುವಕರಿಗೆ ಪಾರದರ್ಶಕ ಮತ್ತು ಅರ್ಹತೆ ಆಧಾರಿತ ಕಾರ್ಯವಿಧಾನದ ಮೂಲಕ ಸರ್ಕಾರಿ ವಲಯದಲ್ಲಿ ಉದ್ಯೋಗಗಳನ್ನು ಒದಗಿಸುವ ಮೂಲಕ ಉದ್ಯೋಗದ ಹೊಸ ನೋಟವನ್ನು ತೆರೆಯುತ್ತದೆ" ಎಂದು ಮುಖ್ಯಮಂತ್ರಿ ಕಚೇರಿಯ ವಕ್ತಾರರು ತಿಳಿಸಿದ್ದಾರೆ.
ಇದನ್ನೂ ಓದಿ: ಭ್ರಷ್ಟಾಚಾರದ ತಡೆಗೆ ಹೆಲ್ಪ್ ಲೈನ್ ಆರಂಭಿಸಿದ ಪಂಜಾಬ್ ಸಿಎಂ ಭಗವಂತ್ ಮಾನ್
ಪಂಜಾಬ್ (Punjab) ನ ಜನರು ನಮಗೆಲ್ಲರಿಗೂ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ.ನಾವು ಹಗಲಿರುಳು ಶ್ರಮಿಸುವ ಮೂಲಕ ಜನರಿಗೆ ಸೇವೆ ಸಲ್ಲಿಸಬೇಕು ಮತ್ತು ಅವರಿಗೆ ಪ್ರಾಮಾಣಿಕ ಸರ್ಕಾರವನ್ನು ನೀಡಬೇಕು.ನಾವು ರಂಗಾ ಪಂಜಾಬ್ ಮಾಡಬೇಕು"ಎಂದು ಮನ್ (Bhagwant Mann) ಈ ಹಿಂದೆ ಟ್ವೀಟ್‌ನಲ್ಲಿ ಹೇಳಿದ್ದರು.
ಇದನ್ನೂ ಓದಿ: Bhagwant Mann Oath : ಪಂಜಾಬ್‌ನ 17ನೇ 'ಸಿಎಂ' ಆಗಿ ಪ್ರಮಾಣ ವಚನ ಸ್ವೀಕರಿಸಿದ ಭಗವಂತ್ ಮಾನ್!
117 ಸದಸ್ಯ ಬಲದ ಪಂಜಾಬ್ ಅಸೆಂಬ್ಲಿಯಲ್ಲಿ ಎಎಪಿ 92 ಸ್ಥಾನಗಳನ್ನು ಗಳಿಸುವ ಮೂಲಕ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿದಳ-ಬಹುಜನ ಸಮಾಜ ಪಕ್ಷಗಳ ಒಕ್ಕೂಟವನ್ನು ಸೋಲಿಸಿತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.