ನವದೆಹಲಿ: ನೂತನವಾಗಿ ಪಂಜಾಬ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಈಗ ಭಗವಂತ್ ಮಾನ್ ಅವರು ಭ್ರಷ್ಟಾಚಾರದ ವಿರುದ್ಧ ಕಟ್ಟು ನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.ಹೌದು, ಈಗ ಸ್ವಾತಂತ್ರ ಹೋರಾಟಗಾರ ಭಗತ್ ಸಿಂಗ್ ಅವರ ಹುತಾತ್ಮ ದಿನವಾಗಿರುವ ಮಾರ್ಚ್ 23 ರಂದು ಭ್ರಷ್ಟಾಚಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಲ್ಪ್ ಲೈನ್ ಗೆ ಚಾಲನೆ ನೀಡಲಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Jaggesh Birthday:ಅಪ್ಪು ವಿಶ್​ ಮಾಡಿದ್ದ ವಿಡಿಯೋ ಮತ್ತೆ ವೈರಲ್.. ಭಾವುಕರಾದ ನಟ ಜಗ್ಗೇಶ್


ಈ ಕುರಿತಾಗಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು "ಭ್ರಷ್ಟಾಚಾರ ನಿಗ್ರಹ ಸಹಾಯವಾಣಿ ಸಂಖ್ಯೆ ನನ್ನ ವೈಯಕ್ತಿಕ ನಂಬರ್ ಆಗಿರುತ್ತದೆ...ಯಾರಾದರೂ ಲಂಚ ಕೇಳಿದರೆ ಆ ನಂಬರ್‌ಗೆ ಆಡಿಯೋ ಮತ್ತು ವಿಡಿಯೋ ಕಳುಹಿಸಿ ಎಂದು ಮಾನ್ (Bhagwant Mann) ವಿನಂತಿಸಿಕೊಂಡಿದ್ದಾರೆ.


'ನಾನು ಯಾವುದೇ ಸರ್ಕಾರಿ ನೌಕರರಿಗೆ ಬೆದರಿಕೆ ಹಾಕುವುದಿಲ್ಲ, ಏಕೆಂದರೆ ಶೇಕಡಾ 99 ರಷ್ಟು ಸರ್ಕಾರಿ ನೌಕರರು ಪ್ರಾಮಾಣಿಕರಾಗಿದ್ದಾರೆ ಆದರೆ ಅಂತಹ ಉದ್ಯೋಗಿಗಳಲ್ಲಿ ಶೇ 1 ರಷ್ಟು ನೌಕರರು ಭ್ರಷ್ಟರಾಗಿದ್ದಾರೆ, ಅದು ವ್ಯವಸ್ಥೆಯನ್ನು ಕೊಳೆತಗೊಳಿಸಿದೆ.ಎಎಪಿ ಮಾತ್ರ ಈ ಭ್ರಷ್ಟ ವ್ಯವಸ್ಥೆಯನ್ನು ಸ್ವಚ್ಛಗೊಳಿಸಲು ಸಾಧ್ಯ" ಎಂದು ಅವರು ಟ್ವೀಟ್‌ ಮಾಡಿದ್ದಾರೆ.


ಜನರು ತಮ್ಮ ದಿನನಿತ್ಯದ ಕೆಲಸಕ್ಕಾಗಿ ಲಂಚವನ್ನು ಕೇಳುವ ಅಥವಾ ಇತರ ದುಷ್ಕೃತ್ಯಗಳಲ್ಲಿ ತೊಡಗಿರುವ ಭ್ರಷ್ಟ ಅಧಿಕಾರಿಗಳ ವೀಡಿಯೊಗಳನ್ನು ಅಪ್‌ಲೋಡ್ ಮಾಡಲು ಈ ಸಂಖ್ಯೆಯು ಪ್ರತ್ಯೇಕವಾಗಿರುತ್ತದೆ.ನಂತರ ಮಾತನಾಡಿದ ಅವರು, ಅಂತಹ ಅಧಿಕಾರಿಗಳಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.



ಅಪ್ಪು ಜೊತೆಗೆ ವಿಶೇಷ ಫೋಟೋ ಹಂಚಿಕೊಂಡ ನಟ ಯಶ್


ಫೆಬ್ರವರಿ 5 ರಂದು ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರು ಎಎಪಿ ಸರ್ಕಾರ ರಚನೆಯಾದರೆ ಸರ್ಕಾರಿ ಉದ್ಯೋಗಗಳಲ್ಲಿನ ಭ್ರಷ್ಟಾಚಾರವನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿದ್ದರು.ಇಂದು ಪೋಲೀಸ್ ಮತ್ತು ಆಡಳಿತ ಅಧಿಕಾರಿಗಳೊಂದಿಗಿನ ತನ್ನ ಮೊದಲ ಸಭೆಯಲ್ಲಿ, ಮಾನ್ ಭ್ರಷ್ಟಾಚಾರ ಮುಕ್ತ ಸರ್ಕಾರದ ಅಗತ್ಯವನ್ನು ಒತ್ತಿ ಹೇಳಿದರು.


ಭ್ರಷ್ಟ ಅಧಿಕಾರಿಗಳಿಗೆ ನನ್ನ ಸರ್ಕಾರದಲ್ಲಿ ಸ್ಥಾನವಿಲ್ಲ, ಅಂತಹ ಯಾವುದೇ ದೂರುಗಳು ನನ್ನ ಗಮನಕ್ಕೆ ಬಂದರೆ ಅಂತಹ ಅಧಿಕಾರಿಗಳಿಗೆ ಯಾವುದೇ ರೀತಿಯ ಸಹಾನುಭೂತಿ ನಿರೀಕ್ಷಿಸಬೇಡಿ ಎಂದು ಮುಖ್ಯಮಂತ್ರಿ ಕಚೇರಿಯಲ್ಲಿ ಸೇರಿದ್ದ ಅಧಿಕಾರಿಗಳಿಗೆ ಸೂಚಿಸಿದರು.


ಇದೇ ಮೊದಲ ಬಾರಿಗೆ ಭಗವಂತ್ ಮಾನ್ ಅವರು ಪೋಲಿಸ್ ಅಧಿಕಾರಿಗಳಿಗೆ ಬಹುಮಾನವನ್ನು ಘೋಷಿಸಿದರು.ಇನ್ನು ಮುಂದೆ ಉಚಿತ ಮತ್ತು ನ್ಯಾಯೋಚಿತ ನ್ಯಾಯವನ್ನು ಖಾತ್ರಿಪಡಿಸುವುದರ ಜೊತೆಗೆ ತಳಮಟ್ಟದಲ್ಲಿ ಸಾಮಾನ್ಯ ಜನರ ಜೀವನದಲ್ಲಿ ಬದಲಾವಣೆಯನ್ನು ಉಂಟುಮಾಡುವುದಕ್ಕಾಗಿ ಅತ್ಯುತ್ತಮ ಪ್ರದರ್ಶನ ಪ್ರಶಸ್ತಿಯನ್ನು ತ್ರೈಮಾಸಿಕ ನೀಡಲಾಗುವುದು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.