ನವದೆಹಲಿ: ಇತ್ತೀಚಿಗಷ್ಟೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಅವರ ಪತ್ರವನ್ನು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಸ್ವೀಕರಿಸಿದ್ದಾರೆ ಮತ್ತು ಆ ಪತ್ರವನ್ನು ರಾಜ್ಯಪಾಲರಿಗೆ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


COMMERCIAL BREAK
SCROLL TO CONTINUE READING

ಜೂನ್ 6 ರಂದು ರಾಜ್ಯ ಕ್ಯಾಬಿನೆಟ್ ಪುನರ್ರಚನೆಯ ನಂತರ ನವಜೋತ್ ಸಿಂಗ್ ತಮ್ಮ ಖಾತೆಯಲ್ಲಿ ಬದಲಾದ ಹಿನ್ನಲೆಯಲ್ಲಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡುವುದಕ್ಕೂ ಮೊದಲು ಅವರು ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ದರು. ತದನಂತರ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ರಾಜೀನಾಮೆ ನೀಡಿರುವ ಪತ್ರವನ್ನು ಹಂಚಿಕೊಂಡಿದ್ದರು.


ಅಲ್ಲದೆ ತಾವು ಪಂಜಾಬ್ ಮುಖ್ಯಮಂತ್ರಿಯವರಿಗೂ ಸಹಿತ ರಾಜೀನಾಮೆ ಪತ್ರವನ್ನು ಸಲ್ಲಿಸಿರುವುದಾಗಿ ಹೇಳಿಕೊಂಡಿದ್ದರು. ಈಗ ದೆಹಲಿಗೆ ಆಗಮಿಸಿರುವ ಸಿಧು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದ ಮಿರ್ಜಾಪುರದಿಂದ ಹಿಂದಿರುಗಿದ ನಂತರ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.