ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು
ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರನ್ನು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.ಮಾನ್ಸಾದ ಜವಾಹರ್ಕೆ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯಲ್ಲಿ ಸಿಧು ಮೂಸೆವಾಲಾ ಸೇರಿದಂತೆ ಕನಿಷ್ಠ ಮೂವರು ಗಾಯಗೊಂಡಿದ್ದರು.ತಕ್ಷಣ ಅವರನ್ನು ಮಾನ್ಸಾದ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಸಿಧು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು. ಅವರಿಗೆ 27 ವರ್ಷ ವಯಸ್ಸಾಗಿತ್ತು.
ಪಂಜಾಬ್‌ನಲ್ಲಿ ಶನಿವಾರದಂದು ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷ ಸರ್ಕಾರವು ಮೂಸೆವಾಲಾ ಅವರ ಭದ್ರತೆಯನ್ನು ಕಡಿತಗೊಳಿಸಿತ್ತು. ಮೂಸೆವಾಲಾ ಅವರಿಗೆ ನಾಲ್ವರು ಪೊಲೀಸ್ ಬಂದೂಕುಧಾರಿಗಳಿದ್ದರು, ಅವರಲ್ಲಿ ಇಬ್ಬರನ್ನು ಹಿಂತೆಗೆದುಕೊಳ್ಳಲಾಯಿತು.
ಸುದ್ದಿ ಮೂಲಗಳ ಪ್ರಕಾರ ಅವರು ತಮ್ಮ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ದಾಳಿಕೋರರು ಸಿಧು ಮೂಸೆವಾಲಾ ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಗುಂಡು ಹಾರಿಸಿದ್ದಾರೆ.ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಮೂಸೆವಾಲಾ ಅವರು ಈ ಹಿಂದೆ 18 ನೇ ಶತಮಾನದ ಸಿಖ್ ಯೋಧ ಮೈ ಭಾಗೋ ಅವರ ಹೆಸರನ್ನು ತಮ್ಮ ಹಾಡು `ಜಟ್ಟಿ ಜೆನಾಯ್ ಮೊರ್ಹ್ ದಿ ಬಂದೂಕ್ ವಾರ್ಗಿ' ನಲ್ಲಿ ದುರುಪಯೋಗಪಡಿಸಿಕೊಂಡು ಸಿಖ್ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಸಾಕಷ್ಟು ವಿವಾದ ಸೃಷ್ಟಿಸಿದ್ದರು. ಆದರೆ ಇದಾದ ಬಳಿಕ ಅವರು ಕ್ಷಮೆಯಾಚಿಸಿದ್ದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.