ಲೋಕಸಭಾ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೊರೆ

ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದ ರಾಘವ್ ಚಡ್ಡಾ, ಈಗ ಚುನಾವಣೆಯಲ್ಲಿ ತಮ್ಮ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೊರೆಹೋಗಿದ್ದಾರೆ.

Last Updated : Jul 4, 2019, 05:27 PM IST
ಲೋಕಸಭಾ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಮೊರೆ  title=

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ದೆಹಲಿಯಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿದ್ದ ರಾಘವ್ ಚಡ್ಡಾ, ಈಗ ಚುನಾವಣೆಯಲ್ಲಿ ತಮ್ಮ ಸೋಲನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಮೊರೆಹೋಗಿದ್ದಾರೆ.

ರಾಘವ್ ಚಡ್ಡಾ ದಕ್ಷಿಣ ದೆಹಲಿ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಲಿ ಅವರು ಬಿಜೆಪಿಯ ರಮೇಶ್ ಬಿಧುರಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈಗ ಅವರು ಕೋರ್ಟ್ ನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವನ್ನು ಪ್ರಶ್ನಿಸಿದ್ದಾರೆ. ತಮ್ಮ ಅರ್ಜಿಯಲ್ಲಿ ಬಿಜೆಪಿ ಅಭ್ಯರ್ಥಿಯು ಕ್ರಿಮಿನಲ್ ಪ್ರಕರಣವನ್ನು ಮರೆಮಾಚಿ ಅವರನ್ನು ವಿಜೇತ ಎಂದು ಘೋಷಿಸಿದ ಹಿನ್ನಲೆಯಲ್ಲಿ ಈಗ ಅವರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.  

ಬಿಹಾರದಲ್ಲಿ ಅವಹೇಳನಕಾರಿ ಭಾಷಣದ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ ಎಂಬ ಅಂಶವನ್ನು ಬಿಧುರಿ ಮರೆಮಾಚಿದ್ದಾರೆ ಎಂದು ರಾಘವ್ ಚಡ್ಡಾ ಆರೋಪಿಸಿದ್ದಾರೆ. ತಮ್ಮ ಚುನಾವಣಾ ಅಫಿಡವಿಟ್ನಲ್ಲಿ ಸುಳ್ಳು ಘೋಷಣೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

Trending News