ನವದೆಹಲಿ: ಇಂದು ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ನೂತನ ಅಧ್ಯಕ್ಷರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ನಿರಸ ಪ್ರದರ್ಶನ ನೀಡಿದ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದರು. ಇದಾದ ನಂತರ ನೂತನ ಅಧ್ಯಕ್ಷರನ್ನು ಕಂಡುಕೊಳ್ಳುವಲ್ಲಿ ಪಕ್ಷ ವಿಫಲವಾಗಿತ್ತು. ಪಕ್ಷದ ಹಿರಿಯ ನಾಯಕರು ರಾಹುಲ್ ಗಾಂಧಿಯವರ ಬಳಿ ಮನವಿ ಮಾಡಿಕೊಂಡರು ಸಹಿತ ಅವರು ಅಧ್ಯಕ್ಷ ಹುದ್ದೆಯಲ್ಲಿ ಮುಂದುವರೆಯಲು ನಿರಾಕರಿಸಿದ್ದರು. 


ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ನೂತನ ಅಧ್ಯಕ್ಷ ರನ್ನು ಆಯ್ಕೆ ಮಾಡುವುದು ಅನಿವಾರ್ಯವಾಯಿತು. ಈ ನೂತನ ಅಧ್ಯಕ್ಷರ  ಆಯ್ಕೆ ನಿಟ್ಟಿನಲ್ಲಿ ಇಂದು ನಡೆಯುತ್ತಿರುವ ಸಭೆ ಮಹತ್ವದ್ದಾಗಿದೆ. ಗಾಂಧಿಗಳಿಗೆ ಹತ್ತಿರದ ವ್ಯಕ್ತಿಯಾಗಿರುವ ಮುಕುಲ್ ವಾಸ್ನಿಕ್ ಅಧ್ಯಕ್ಷ ಹುದ್ದೆಗೆ ಸೂಕ್ತ ವ್ಯಕ್ತಿ ಎಂದು ಹೇಳಲಾಗುತ್ತಿದೆ. ಈಗ ಪೂರ್ವ ವಲಯದಲ್ಲಿರುವ ಸೋನಿಯಾ ಗಾಂಧಿ ಹಾಗೂ ಪಶ್ಚಿಮ ವಲಯದಲ್ಲಿರುವ ಸೋನಿಯಾ ಗಾಂಧಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗಿದೆ.


ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸೋನಿಯಾ ಗಾಂಧಿ ' ವಲಯದ ಭಾಗವಾಗುವ ಮೂಲಕ ವಿಷಯವನ್ನು ಇನ್ನಷ್ಟು ಸಂಕೀರ್ಣಗೋಳಿಸಲಾರೆವು. ನಮ್ಮ ಹೆಸರುಗಳನ್ನೂ ವಲಯಗಳಲ್ಲಿ ಸೇರಿಸಿರುವುದು ತಪ್ಪು ಎಂದು ಹೇಳಿದರು.