ನವದೆಹಲಿ: ಗುಜರಾತ್‌ನ ಬನಸ್ಕಂತದಲ್ಲಿ ಸೋಮವಾರ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 21 ಜನ ಸಾವನ್ನಪ್ಪಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಗುಜರಾತಿನಲ್ಲಿ ನಡೆದ ಬಸ್ ಅಪಘಾತದಲ್ಲಿ ಭಕ್ತರು ಮೃತಪಟ್ಟಿದ್ದಾರೆ ಮತ್ತು ಗಾಯಗೊಂಡಿರುವ ಸುದ್ದಿ ಕೇಳಿ ನೋವಾಗಿದೆ. ಮೃತರ ಕುಟುಂಬಕ್ಕೆ ನನ್ನ ಸಂತಾಪ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ನಾನು ಬಯಸುತ್ತೇನೆ" ಎಂದಿದ್ದಾರೆ.


[[{"fid":"181204","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಅಂಬಾಜಿಯ ತ್ರಿಶೂಲಿಯಾ ಘಾಟ್ ಬಳಿ ಸುಮಾರು 70 ಪ್ರಯಾಣಿಕರನ್ನು ಹೊತ್ತ ಖಾಸಗಿ ಐಷಾರಾಮಿ ಬಸ್ ಪಲ್ಟಿಯಾದ ಕಾರಣ ಈ ಅಪಘಾತ ಸಂಭವಿಸಿದ್ದು, ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಅಜಿತ್ ರಾಜಿಯನ್ ಹೇಳಿದ್ದಾರೆ.