ನವದೆಹಲಿ: ಕೃಷಿ ಕಾನೂನುಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವವರನ್ನು ಆಂದೋಲನ ಜೀವಿ ಎಂದು ಕರೆದ ಪ್ರಧಾನಿ ಹೇಳಿಕೆಗೆ ರಾಹುಲ್ ಗಾಂಧಿ ಭಿನ್ನವಾಗಿ ತಿರುಗೇಟು ನೀಡಿದ್ದಾರೆ.
ರಾಷ್ಟ್ರಪತಿಯವರ ಭಾಷಣಕ್ಕೆ ಉತ್ತರಿಸಿದ ಪಿಎಂ ಮೋದಿ, ರೈತ ಪ್ರತಿಭಟನೆ (Farmers protest) ಯ ಹಿಂದೆ ಇರುವವರ ಬಗ್ಗೆ ದೇಶವು ಎಚ್ಚರದಿಂದಿರಬೇಕು ಎಂದು ಹೇಳಿದ್ದರು."ಆಂದೋಲನ ಜೀವಿ ಹೊಸ ಬೆಳೆ ಇದೆ.ಅವರು ಪ್ರತಿಭಟನೆಗಾಗಿ ಬದುಕುತ್ತಾರೆ. ಅವರು ಹೊಸ ಆಂದೋಲನವನ್ನು ಪ್ರಾರಂಭಿಸುವ ಮಾರ್ಗಗಳನ್ನು ಹುಡುಕುತ್ತಾರೆ...ಈ ಆಂದೋಲನ ಜೀವಿಗಳ ಬಗ್ಗೆ ದೇಶವು ಜಾಗೃತರಾಗಿರಬೇಕು" ಎಂದು ಪ್ರಧಾನಿ ಮೋದಿ ರಾಜ್ಯಸಭೆಗೆ ತಿಳಿಸಿದರು.
ಇದನ್ನೂ ಓದಿ - ದೆಹಲಿ-ಯುಪಿ ಗಡಿ ಪ್ರದೇಶದಲ್ಲಿ ಮತ್ತಷ್ಟು ತೀವ್ರಗೊಂಡ ರೈತರ ಪ್ರತಿಭಟನೆ
Crony-जीवी है जो
देश बेच रहा है वो।#PSU_PSB_Sale— Rahul Gandhi (@RahulGandhi) February 10, 2021
ಇನ್ನೊಂದೆಡೆಗೆ ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕು ಎಂಬ ರೈತರ ಬೇಡಿಕೆಯನ್ನು ಕಾಂಗ್ರೆಸ್ ಬೆಂಬಲಿಸುತ್ತಿದೆ.ಮೋದಿ ಟೀಕೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಆಂದೋಲನ ಜೀವಿ ಎಂದು ಹೇಳಲು ಹೆಮ್ಮೆಯಾಗುತ್ತದೆ.ಮಹಾತ್ಮಾ ಸರ್ವಶ್ರೇಷ್ಠ ಆಂದೋಲನ ಜೀವಿಯಾಗಿದ್ದರು ಎಂದು ತಿರುಗೇಟು ನೀಡಿದರು.
ಇದಾದ ನಂತರ ರಾಹುಲ್ ಗಾಂಧಿ ಕೂಡ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿ 'crony' ಜೀವಿ ಈ ದೇಶವನ್ನು ಮಾರುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರ ಆಂದೋಲನ ಜೀವಿ ಟೀಕೆಗೆ ತಿರುಗೇಟು ನೀಡಿದರು.
ಇದನ್ನೂ ಓದಿ: ಎಲ್ಲರಿಗೂ ಪ್ರತಿಭಟಿಸುವ ಹಕ್ಕಿದೆ, ರೈತರ ಹೋರಾಟ ಮುಂದುವರೆಯಲಿ: ಸುಪ್ರೀಂ ಕೋರ್ಟ್
ದೆಹಲಿ-ಹರಿಯಾಣ ಗಡಿಯಲ್ಲಿ ಕ್ಯಾಂಪಿಂಗ್ ಮಾಡುತ್ತಿರುವ ಸಾವಿರಾರು ರೈತರು ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳದ ಹೊರತು ಮನೆಗೆ ಹಿಂದಿರುಗುವುದಿಲ್ಲ ಎಂದು ಹೇಳಿದ್ದಾರೆ. ಕಾನೂನು ಷರತ್ತುಗಳನ್ನು ಷರತ್ತುಗಳ ಮೂಲಕ ಚರ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ ಮತ್ತು ಒಂದೂವರೆ ವರ್ಷಗಳ ಕಾಲ ಅವುಗಳ ಅನುಷ್ಠಾನವನ್ನು ವಿರಾಮಗೊಳಿಸಲು ಸಹ ಒಪ್ಪಿದೆ, ಆದರೆ ರೈತರು ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಪಡಿಸಬೇಕೆಂದು ಆಗ್ರಹಿಸುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.