ಕೋಲ್ಕತ್ತಾ: ರಾಹುಲ್ ಗಾಂಧಿ 'ಹಿ ಈಸ್ ಜಸ್ಟ್ ಎ ಕಿಡ್'  ಚಿಕ್ಕ ಹುಡುಗ ಇದ್ದಂತೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಲೇವಡಿ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇತ್ತೀಚೆಗೆ ಪಶ್ಚಿಮ ಬಂಗಾಳದಲ್ಲಿ ಚುನಾವಣಾ ರ‍್ಯಾಲಿ ನಡೆಸಿದ್ದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಮತಾ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದ್ದರು. ಇದೀಗ ರಾಹುಲ್ ಟೀಕೆ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಬುಧವಾರ ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿ-'ಹಿ ಈಸ್ ಜಸ್ಟ್ ಎ ಕಿಡ್', ಅದರ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಎಂದಿದ್ದಾರೆ. 


ಪಶ್ಚಿಮ ಬಂಗಾಳದ ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ''ಒಂದು ಕಡೆ ಮೋದಿ ಜೀ ಸುಳ್ಳುಗಳನ್ನು ಹೇಳುತ್ತಿರುತ್ತಾರೆ ಹಾಗೂ ಮತ್ತೊಂದು ಕಡೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕೇವಲ ಭರವಸೆಗಳನ್ನು ನೀಡುತ್ತಿರುತ್ತಾರೆ. ಆದರೆ, ಅದ್ಯಾವುದೂ ನಡೆಯುವುದಿಲ್ಲ'' ಎಂದು ರಾಹುಲ್ ಟೀಕಿಸಿದ್ದರು.