ನವದೆಹಲಿ : ಎರಡು ದಶಕಗಳ ಕಾಲ ಕಾಂಗ್ರೆಸ್ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿ, ಇದೀಗ ರಾಹುಲ್ ಗಾಂಧಿ ಅವರಿಗೆ ಪಕ್ಷದ ಆಳ್ವಿಕೆಯನ್ನು ಹಸ್ತಾಂತರಿಸಿದ ನಂತರದ, ಸೋನಿಯಾ ತಮ್ಮ ಮಗನನ್ನು ತಮ್ಮ ಬಾಸ್ ಎಂದೇ ಪರಿಗಣಿಸಿದ್ದಾರೆ. 


COMMERCIAL BREAK
SCROLL TO CONTINUE READING

ಕಾಂಗ್ರೆಸ್ ಪಕ್ಷದ ಸಂಸದೀಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸೋನಿಯಾ, "ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಯಾವುದೇ ಅನುಮಾನವಿಲ್ಲ, ನೀವೆಲ್ಲರೂ ಅವರನ್ನು ಬೆಂಬಲಿಸುವುದಾಗಿ ಭಾವಿಸುತ್ತೇನೆ" ಎಂದು ಅವರು ಹೇಳಿದರು.


ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಟಾರ್ಗೆಟ್ ಮಾಡಿದ ಸೋನಿಯಾ, ಪ್ರಸಕ್ತ ಸರ್ಕಾರದಲ್ಲಿ ಸಂವಿಧಾನಾತ್ಮಕ ಅಧಿಕಾರಗಳನ್ನು ದುರ್ಬಲಗೊಳಿಸಲಾಗಿದೆ. "ಈ ಸರ್ಕಾರ ಅಧಿಕಾರಕ್ಕೆ ಬಂದು 4 ವರ್ಷಗಳು ಕಳೆದಿದ್ದರೂ, ಯಾವುದೇ ಸಂಸ್ಥೆಗಳು ವ್ಯವಸ್ಥಿತವಾಗಿಲ್ಲ. ಸಂಸತ್ತು ನ್ಯಾಯಾಂಗ, ಮಾಧ್ಯಮ ಮತ್ತು ನಾಗರಿಕ ಸಮಾಜವಾಗಿದೆ. ತನಿಖಾ ಏಜೆನ್ಸಿಗಳು ರಾಜಕೀಯ ಎದುರಾಳಿಗಳ ವಿರುದ್ಧ ಮೌನ ವಹಿಸಿವೆ. ಹೊಸ ಉದ್ಯೋಗಗಳು ಸೃಷ್ಟಿಯಾಗಿಲ್ಲ" ಎಂದು ಅವರು ಆರೋಪಿಸಿದರು. 


ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಮಾಡಿದ ಆರೋಪಗಳ ಕುರಿತು ಮಾತನಾಡಿದ ಸೋನಿಯಾ, "ಪ್ರಧಾನಮಂತ್ರಿ ಹೊಸತೇನೂ ಹೇಳುತ್ತಿಲ್ಲ, ಅವರು ಹಳೆಯ ವಿಷಯಗಳನ್ನು ಪುನರಾವರ್ತಿಸುತ್ತಿದ್ದಾರೆ, ಆದರೆ ಜನರು ತಮ್ಮ ಕೆಲಸದ ಬಗ್ಗೆ ಆಸಕ್ತರಾಗಿದ್ದಾರೆ. ಅವರು ತಮ್ಮ ಭವಿಷ್ಯದ ಬಗ್ಗೆ ತಿಳಿಯಬೇಕಿದೆ" ಎಂದು ಹೇಳಿದರು. 


71 ವರ್ಷದ ಸೋನಿಯಾ ಗಾಂಧಿ ಅವರು 19 ವರ್ಷಗಳ ಕಾಲ ಎಐಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ಡಿಸೆಂಬರ್ ನಲ್ಲಿ ರಾಹುಲ್ ಗಾಂಧಿ ಅವರಿಗೆ ಅಧ್ಯಕ್ಷ ಸ್ಥಾನದ ಪಟ್ಟ ಕಟ್ಟಿದ್ದರು.
ರಾಹುಲ್ ಅವರಿಗೆ ಮೊದಲು ಮೋತಿಲಾಲ್ ನೆಹರು, ಜವಾಹರಲಾಲ್ ನೆಹರು, ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಸೋನಿಯಾ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು.