)
Vote Adhikar Rally in Bengaluru: 2024ರ ಸಂಸತ್ ಚುನಾವಣೆಯ ಸಮಯದಲ್ಲಿ ನಡೆದ ಮತ ಕಳ್ಳತನದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಭಟನಾ ರ್ಯಾಲಿಯ ನೇತೃತ್ವ ವಹಿಸಿಕೊಂಡಿದ್ದಾರೆ. ಮತಗಳ್ಳತನದ ಆರೋಪದ ಮೇರೆಗೆ ಅವರು ಚುನಾವಣಾ ಆಯೋಗದ ವಿರುದ್ಧ 'ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ'ದ ಮೂಲಕ ಕಿಡಿಕಾರಿದ್ದಾರೆ.
ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಿರುವ ಬೃಹತ್ ಪ್ರತಿಭಟನಾ ಸಮಾವೇಶದ ಬಳಿಕ ನಂತರ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಮೆರವಣಿಗೆಯ ಮೂಲಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಮತಗಳ್ಳತನದ ಕುರಿತಂತೆ ದಾಖಲೆಸಹಿತ ದೂರು ನೀಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಹಲವಾರು ಸಚಿವರು ಭಾಗವಹಿಸಲಿದ್ದಾರೆ. "ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ" ಎಂಬ ಶೀರ್ಷಿಕೆಯಡಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ತನ್ನ ಶಕ್ತಿಯನ್ನ ಪ್ರದರ್ಶಿಸಿದೆ.
ಬಿಜೆಪಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗ ನಡೆದುಕೊಳ್ಳುತ್ತಿದೆ. ಮತಗಳ ಕಳುವಿಗೆ ನೆರವು ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಜನಾಂದೋಲನ ನಡೆಸಲು ಕಾಂಗ್ರೆಸ್ ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತಿದೆ. ಈ ಪ್ರತಿಭಟನಾ ಸಮಾವೇಶಕ್ಕೆ ಸ್ವಾತಂತ್ರ್ಯ ಉದ್ಯಾನದ ಬಹುಮಹಡಿ ವಾಹನ ನಿಲುಗಡೆ ಕಟ್ಟಡದ ತಳ ಮಹಡಿಯಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಸಾರ್ವಜನಿಕರಿಗಾಗಿ ಆಸನಗಳನ್ನು ಅಳವಡಿಸಲಾಗಿದೆ. ಇದರ ಜೊತೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿಯೂ ಆಸನ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಕಾರ್ಯಕ್ರಮ ವೀಕ್ಷಣೆಗೆ LED ವ್ಯವಸ್ಥೆ ಮಾಡಲಾಗಿದೆ.
पिछले चुनाव में हमारे सामने एक सवाल उठा।
पहले लोकसभा का चुनाव हुआ, फिर महाराष्ट्र का विधानसभा चुनाव हुआ। लोकसभा में हमारा गठबंधन भारी सीटों के साथ चुनाव जीता, लेकिन फिर चार महीने बाद विधानसभा चुनाव में BJP जीत गई।
ये बेहद चौंकाने वाली बात थी। हमने पता किया तो मालूम चला कि… pic.twitter.com/0ZDHIBSUQ3
— Congress (@INCIndia) August 8, 2025
ರಾಹುಲ್ ಗಾಂಧಿ ಆರೋಪವೇನು?
ಭಾರತೀಯ ಚುನಾವಣಾ ಆಯೋಗವು (ECI) "ಕ್ರಿಮಿನಲ್ ವಂಚನೆ" ಮತ್ತು ಮತಗಳ್ಳತನಕ್ಕೆ ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗಾಗಿ ಬರೋಬ್ಬರಿ 1,00,250 "ನಕಲಿ ಮತಗಳನ್ನು" ಸೃಷ್ಟಿಸಲಾಗಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪಗಳನ್ನು ಗಮನದಲ್ಲಿಟ್ಟುಕೊಂಡು, ಕರ್ನಾಟಕ ಮುಖ್ಯ ಚುನಾವಣಾ ಅಧಿಕಾರಿ (CEO) ತಮ್ಮ ಸಾಕ್ಷ್ಯವನ್ನು ಸಲ್ಲಿಸುವಂತೆ ಕೇಳಿಕೊಂಡಿದೆ.
ಇದನ್ನೂ ಓದಿ: ನಿನ್ನೆ ದೆಹಲಿಗೆ ತೆರಳಿದ ವಿಪಕ್ಷ ನಾಯಕ ಆರ್ ಅಶೋಕ್
ರಾಜಕೀಯ ಗಿಮಿಕ್ ಎಂದ ಬಿ.ವೈ.ವಿಜಯೇಂದ್ರ
ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಮತ ಅಧಿಕಾರ್ ರ್ಯಾಲಿ'ಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜಕೀಯ ಗಿಮಿಕ್ ಎಂದು ಟೀಕಿಸಿದ್ದಾರೆ. ಈ ಪ್ರತಿಭಟನೆಯಲ್ಲಿ ಯಾವುದೇ ರೀತಿಯ ಸತ್ಯವಿಲ್ಲವೆಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ನಕಲಿ ಮತದಾರರು ಇದ್ದಾರೆಂದು ಆರೋಪಿಸಿ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ದ್ವಿಮುಖ ನೀತಿಯನ್ನು ಕಾಯ್ದುಕೊಳ್ಳುತ್ತಿದೆ ಎಂದು ವಿಜಯೇಂದ್ರ ಅವರು ಟೀಕಿಸಿದ್ದಾರೆ.
ಇನ್ನೂ ರಾಹುಲ್ ಗಾಂಧಿ ನಡೆಸುತ್ತಿರುವ 'ಮತ ಅಧಿಕಾರ್ ರ್ಯಾಲಿ'ಯನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನ ಸಂಚಾರ ಪೊಲೀಸರು ಎಂಜಿ ರಸ್ತೆ, ಕಬ್ಬನ್ ರಸ್ತೆ ಮತ್ತು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ನಿರ್ಬಂಧಗಳನ್ನು ವಿಧಿಸಿ ಪ್ರಯಾಣಿಕರಿಗೆ ಬದಲಿ ಮಾರ್ಗದ ಸಲಹೆ ನೀಡಿದ್ದಾರೆ.