PM Modi ಗೂ ಮುನ್ನ ಅಮೆರಿಕಾಗೆ ತೆರಳಲಿದ್ದಾರೆ ರಾಹುಲ್ ಗಾಂಧಿ, 10 ದಿನಗಳ ಕಾಲ ಏನ್ ಮಾಡಲಿದ್ದಾರೆ?

Rahul Gandhi US Visit: ಕರ್ನಾಟಕದ ಕೋಟೆಯನ್ನು ಗೆದ್ದು ಇದೀಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೆರಿಕಕ್ಕೆ ತೆರಳಲಿದ್ದಾರೆ. ಪ್ರಧಾನಿ ಮೋದಿ ಅವರು ಜೂನ್ 22 ರಂದು ಅಮೆರಿಕಕ್ಕೆ ಭೇಟಿ ನೀಡಲಿರುವ ಕಾರಣ ರಾಹುಲ್ ಅವರ ಈ ಭೇಟಿ ಭಾರಿ ಕುತೂಹಲಕ್ಕೆ ಕಾರಣವಾಗಲಿದೆ.  

Written by - Nitin Tabib | Last Updated : May 16, 2023, 03:19 PM IST
  • ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಲಂಡನ್‌ಗೆ ಭೇಟಿ ನೀಡಿದ್ದು, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಭಾಷಣ ಮಾಡಿದ್ದರು.
  • ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಕಾಂಗ್ರೆಸ್ ನ ವಿರೋಧಿ ಪಕ್ಷಗಳು ವಾಗ್ದಾಳಿ ನಡೆಸಿವೆ.
  • ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ಬಗ್ಗೆ ಭಾರತೀಯ ಜನತಾ ಪಕ್ಷದ ಅನೇಕ ಹಿರಿಯ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲ, ಸಂಸತ್ತಿನಲ್ಲೂ ಭಾರೀ ಕೋಲಾಹಲ ಉಂಟಾಗಿತ್ತು.
PM Modi ಗೂ ಮುನ್ನ ಅಮೆರಿಕಾಗೆ ತೆರಳಲಿದ್ದಾರೆ ರಾಹುಲ್ ಗಾಂಧಿ, 10 ದಿನಗಳ ಕಾಲ ಏನ್ ಮಾಡಲಿದ್ದಾರೆ? title=
ರಾಹುಲ್ ಗಾಂಧಿ ಅಮೆರಿಕಾ ಪ್ರವಾಸ

Rahul Gandhi America Visit: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಭರ್ಜರಿ ಜಯದ ಬಳಿಕ ಕಾಂಗ್ರೆಸ್ ಮುಖಂಡ  ರಾಹುಲ್ ಗಾಂಧಿ ಕುರಿತು ಎಲ್ಲೆಡೆ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ. ಮಾಧ್ಯಮ ವರದಿಗಳ ಪ್ರಕಾರ ರಾಹುಲ್ ಗಾಂಧಿ ಮೇ 30 ರಂದು ಅಮೆರಿಕಕ್ಕೆ ತೆರಳಲಿದ್ದಾರೆ. ರಾಹುಲ್ ಗಾಂಧಿ 10 ದಿನಗಳ ಕಾಲ ಅಮೆರಿಕದಲ್ಲೇ ಇರಲಿದ್ದಾರೆ. ಜೂನ್ 22 ರಂದು ಪ್ರಧಾನಿ ನರೇಂದ್ರ ಮೋದಿ ಕೂಡ ಅಮೆರಿಕಕ್ಕೆ ಭೇಟಿ ನೀಡಲಿರುವ ಕಾರಣ ಪ್ರಧಾನಿ ಅವರ ಈ ಭೇಟಿ ಭಾರಿ ಗಮನ ಸೆಳೆದಿದೆ, ಆದರೆ ಅದಕ್ಕೂ ಮುನ್ನ ರಾಹುಲ್ ಗಾಂಧಿ ಯುಎಸ್‌ಗೆ ಹೋಗಲು ಪ್ಲಾನ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಸಂಸದ ರಾಹುಲ್ ಗಾಂಧಿ ಅವರು ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್‌ನಲ್ಲಿ 5000 ಭಾರತೀಯರ ರ್ಯಾಲಿ ನಡೆಸಿ  ಮತ್ತು  ಅಲ್ಲಿನ ಭಾರತೀಯ ಸಮುದಾಯದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ-ಸಿUkraine Crisis: ರಷ್ಯಾಗೆ ಶಶ್ತ್ರಾಸ್ತ್ರ ಪೂರೈಕೆ ನಿಲ್ಲಿಸಲು ಚೀನಾ ಜೊತೆಗೆ ಮಾತುಕತೆ : ಪೆಂಟಾಗನ್

ಪ್ಯಾನೆಲ್ ಚರ್ಚೆಯಲ್ಲಿ ಭಾಗಿಯಾಗಲಿದ್ದಾರೆ
ಅಮೆರಿಕ ಪ್ರವಾಸದ ವೇಳೆ ರಾಹುಲ್ ಗಾಂಧಿ ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಪ್ಯಾನೆಲ್ ದಿಸ್ಸ್ಕಷನ್ ಗಳಲ್ಲಿ ಭಾಗಿಯಾಗಲಿದ್ದಾರೆ. ಇದಲ್ಲದೇ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ಭಾಷಣಕಾರರಾಗಿ ಜನರ ಮಧ್ಯೆ ಇರಲಿದ್ದಾರೆ. ಜೂನ್ 22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ವೇತಭವನದ ಅತಿಥಿಯಾಗಿ ಅಲ್ಲಿಗೆ ಹಾಜರಾಗಲಿರುವ ಕಾರಣ ರಾಹುಲ್ ಗಾಂಧಿಯವರ ಈ ಭೇಟಿಯಿಂದ ಹಲವು ಅರ್ಥಗಳನ್ನು ಕಲ್ಪಿಸಲಾಗುತ್ತಿದೆ. ಪ್ರಧಾನಿ ಮೋದಿ ಅವರನ್ನು ಅಮೆರಿಕ ಅಧ್ಯಕ್ಷ ಬಿಡೆನ್ ಮತ್ತು ಅವರ ಪತ್ನಿ ಸ್ವಾಗತಿಸಲಿದ್ದಾರೆ. ಶ್ವೇತಭವನದಲ್ಲಿ ಪ್ರಧಾನಿ ಮೋದಿ ಭೋಜನ ಸವಿಯಲಿದ್ದಾರೆ. ಕಳೆದ ವಾರವೇ ಪ್ರಧಾನಿ ಭೇಟಿಯ ಪತ್ರಿಕಾ ಹೇಳಿಕೆಯನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿತ್ತು.

ಇದನ್ನೂ ಓದಿ-Viral Video: ಜಗಳದ ನಡುವೆಯೇ ಹಾವನ್ನು ಹಗ್ಗದಂತೆ ಬಳಸಿ ಎದುರಾಳಿ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಭೂಪ... ವಿಡಿಯೋ ನೋಡಿ

ಲಂಡನ್ ಪ್ರವಾಸದಲ್ಲಿ ಗಲಾಟೆ ನಡೆದಿತ್ತು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಲಂಡನ್‌ಗೆ ಭೇಟಿ ನೀಡಿದ್ದು, ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಪ್ರಧಾನಿ ಮೋದಿ ಅವರನ್ನು ಟೀಕಿಸಿ ಭಾಷಣ ಮಾಡಿದ್ದರು. ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆಗೆ ಕಾಂಗ್ರೆಸ್ ನ ವಿರೋಧಿ  ಪಕ್ಷಗಳು ವಾಗ್ದಾಳಿ ನಡೆಸಿವೆ. ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಗಾಂಧಿ ಅವರ ಭಾಷಣದ ಬಗ್ಗೆ ಭಾರತೀಯ ಜನತಾ ಪಕ್ಷದ ಅನೇಕ ಹಿರಿಯ ನಾಯಕರು ಟೀಕಿಸಿದ್ದಾರೆ. ಅಷ್ಟೇ ಅಲ್ಲ, ಸಂಸತ್ತಿನಲ್ಲೂ ಭಾರೀ ಕೋಲಾಹಲ ಉಂಟಾಗಿತ್ತು.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News