ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಮೇಥಿಯಲ್ಲಿ ಹಿನ್ನಡೆ ಸಾಧಿಸಿದ್ದಾರೆ.ಇವರ ಪ್ರತಿಸ್ಪರ್ಧಿ ಬಿಜೆಪಿಯ ಸ್ಮೃತಿ ಇರಾನಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

2004 ರಿಂದ ಅಮೇಥಿ ಕ್ಷೇತ್ರವನ್ನು ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದಾರೆ.ಈಗ ಬೆಳಗಿನ ಪ್ರಾರಂಭಿಕ ಸುತ್ತಿನ ಮತ ಎಣಿಕೆಯಲ್ಲಿ ಹಿನ್ನಡೆ ಅನುಭವಿಸಿದ್ದಾರೆ. ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಅಮೇಥಿ ಬಹುತೇಕ ಗ್ರಾಮೀಣ ಕ್ಷೇತ್ರವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ರಾಹುಲ್ ಗೆ ಸ್ಮೃತಿ ಇರಾನಿ ಭಾರಿ ಪೈಪೋಟಿ ನೀಡಲಿದ್ದಾರೆ.


2014 ರಲ್ಲಿ ರಾಹುಲ್ ಗಾಂಧಿ  ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇದಾದ ನಂತರ ಸ್ಮೃತಿ ಇರಾನಿ ಈ ಕ್ಷೇತ್ರ ಅಮೇಥಿಗೆ ನಿರಂತರವಾಗಿ ಭೇಟಿ ನೀಡಿ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಚಾಲನೆ ನೀಡಿದ್ದರು. ಹಲವು ದಶಕಗಳಿಂದ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ  ಬಿಜೆಪಿ ಗೆಲುವು ಸಾಧಿಸಿದ್ದಲ್ಲಿ ಅದೊಂದು ಐತಿಹಾಸಿಕ ಗೆಲುವಾಗಲಿದೆ.1998 ರಲ್ಲಿ ಸೋಲನ್ನು ಅನುಭವಿಸಿದ್ದು ಬಿಟ್ಟರೆ ಕಳೆದ ಮೂರು ದಶಕಗಳಲ್ಲಿ ಕಾಂಗ್ರೆಸ್ ಈ ಕ್ಷೇತ್ರದಲ್ಲಿ ಸೋಲನ್ನು ಅನುಭವಿಸಿಲ್ಲ.