ಬಂಡೀಪುರ ಅರಣ್ಯದಲ್ಲಿನ ಸಂಚಾರ ನಿಷೇಧ ಮುಕ್ತಗೊಳಿಸಲು ರಾಹುಲ್ ಗಾಂಧಿ ಆಗ್ರಹ
ಬಂಡೀಪುರ ಮೀಸಲು ಅಭಿಯಾರಣ್ಯದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ಸಂಕಷ್ಟವನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ನವದೆಹಲಿ: ಬಂಡೀಪುರ ಮೀಸಲು ಅಭಿಯಾರಣ್ಯದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂಬತ್ತು ಗಂಟೆಗಳ ಸಂಚಾರ ನಿಷೇಧವು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ಸಂಕಷ್ಟವನ್ನುಂಟು ಮಾಡಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಭಾನುವಾರ ಹೇಳಿದ್ದಾರೆ.
ಪರಿಸರ ರಕ್ಷಣೆ ಜೊತೆಗೆ ಸ್ಥಳೀಯ ಸಮುದಾಯಗಳ ಹಿತಾಸಕ್ತಿಗಳನ್ನು ಕಾಪಾಡಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಅವರು ಕೋರಿದ್ದಾರೆ. ಹುಲಿ ಮೀಸಲು ಪ್ರದೇಶವಾಗಿರುವ ಈ ಅಭಯಾರಣ್ಯದ ಮೂಲಕ ಸಂಚಾರವನ್ನು ರಾತ್ರಿ 9 ರಿಂದ ಬೆಳಿಗ್ಗೆ 6 ರವರೆಗೆ ನಿಷೇಧಿಸಲಾಗಿದೆ. ಈ ಕ್ರಮವನ್ನು ವನ್ಯಜೀವಿಗಳಿಗೆ ತೊಂದರೆ ಕಡಿಮೆ ಮಾಡುವ ಉದ್ದೇಶದಿಂದ ತೆಗೆದುಕೊಳ್ಳಲಾಗಿತ್ತು ಎನ್ನಲಾಗಿದೆ.
ಕೇರಳದ ವಯನಾಡದ ಸಂಸದರಾಗಿರುವ ರಾಹುಲ್ ಗಾಂಧಿ, ಸೆಪ್ಟೆಂಬರ್ 25 ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿರುವ ಯುವಕರಿಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. 'ಸೆಪ್ಟೆಂಬರ್ 25 ರಿಂದ ಎನ್‌ಎಚ್ -766 ರ ದೈನಂದಿನ 9 ಗಂಟೆಗಳ ಸಂಚಾರ ನಿಷೇಧವನ್ನು ವಿರೋಧಿಸಿ ಸೆಪ್ಟೆಂಬರ್ 25 ರಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹಕ್ಕೆ ನಿಂತಿರುವ ಯುವಕರೊಂದಿಗೆ ನಾನು ಒಗ್ಗಟ್ಟಿನಿಂದ ನಿಲ್ಲುತ್ತೇನೆ, ಇದು ಕೇರಳ ಮತ್ತು ಕರ್ನಾಟಕದ ಲಕ್ಷಾಂತರ ಜನರಿಗೆ ತೊಂದರೆಗಳನ್ನುಂಟು ಮಾಡಿದೆ ರಾಹುಲ್ ಟ್ವೀಟ್ ಮೂಲಕ ಹೇಳಿದ್ದಾರೆ.
'ಪರಿಸರವನ್ನು ರಕ್ಷಿಸುವ ನಮ್ಮ ಸಾಮೂಹಿಕ ಜವಾಬ್ದಾರಿಯನ್ನು ಎತ್ತಿ ಹಿಡಿಯುವಾಗ ಸ್ಥಳೀಯ ಸಮುದಾಯಗಳ ಹಿತಾಸಕ್ತಿಗಳನ್ನು ಕಾಪಾಡುವಂತೆ ನಾನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸುತ್ತೇನೆ' ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ತಿಂಗಳು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದ ವಯನಾಡ್ ಮತ್ತು ಕರ್ನಾಟಕದ ಮೈಸೂರನ್ನು ಸಂಪರ್ಕಿಸುವ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಮೂಲಕ ಹೋಗುವ ರಸ್ತೆ ಸಂಚಾರ ನಿರ್ಭಂಧದ ಪರವಾಗಿ ಬೆಂಬಲ ವ್ಯಕ್ತಪಡಿಸಿದ್ದರು. ಈ ನಿಷೇಧದಿಂದ ವಯನಾಡ್, ಕೋಚಿಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳ ಜನರ ಮೇಲೆ ಪರಿಣಾಮ ಬೀರುತ್ತದೆ.