ಬೆಂಗಳೂರು: ಚುನಾವಣಾ ಹೊಸ್ತಿಲಲ್ಲಿರುವ ಕರ್ನಾಟಕಕ್ಕೆ ನಾಳೆ  ಜನಾಶೀರ್ವಾದ ಯಾತ್ರೆಯ ಪ್ರಯುಕ್ತ  ಕಾಂಗ್ರೇಸ್ ಮುಖ್ಯಸ್ಥ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ದೆಹಲಿಯಿಂದ ಹೊರಟು ಬೆಳಗ್ಗೆ 11:30:ಕ್ಕೆ ಬೆಳಗಾವಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ 


COMMERCIAL BREAK
SCROLL TO CONTINUE READING

ನಂತರ ಅಲ್ಲಿಂದ ಹೊರಟು  ಅಥಣಿಯ ಕರಿಮಾಸುಥಿಯಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಅದೇ ದಿನ ವಿಜಯಪುರದ ಜಿಲ್ಲಾ ಕಾಂಗ್ರೆಸ್ ಮುಖಂಡರು ಬ್ಲಾಕ್ ಸಮಿತಿಯ ಸದಸ್ಯರ ಜೊತೆ ಸರ್ಕ್ಯುಟ್ ಹೌಸ್ ನಲ್ಲಿ ಸಭೆ ನಡೆಸಲಿದ್ದಾರೆ. ವಿಜಯಪುರದಲ್ಲಿ ರಾತ್ರಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


ಕರ್ನಾಟಕದ ಚುನಾವಣೆಯನ್ನು ಪ್ರತಿಷ್ಟಿತ ವಿಚಾರವಾಗಿ ತೆಗೆದುಕೊಂಡಿರುವ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ಹಿಡಿಯಬೇಕೆನ್ನುವ ಶತ ಪ್ರಯತ್ನದಲ್ಲಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಒಂದು ಹಂತದ ಪ್ರವಾಸವನ್ನು ಹೈದರಾಬಾದ್ ಕರ್ನಾಟಕದಲ್ಲಿ ಮುಗಿಸಿರುವ ರಾಹುಲ್ ಗಾಂಧಿ, ಈ ಭಾರಿ ಮುಂಬೈ ಕರ್ನಾಟಕವನ್ನು ಕೇಂದ್ರಿಕರಿಸಿ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.