ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಸಿದ್ದರಾಮಯ್ಯ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಗೆ ಕರ್ನಾಟಕದಿಂದ ಸ್ಪರ್ಧಿಸುವ ಯಾವುದೇ ಯೋಚನೆ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

Last Updated : Dec 23, 2018, 04:37 PM IST
ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸಲ್ಲ: ಊಹಾಪೋಹಗಳಿಗೆ ತೆರೆ ಎಳೆದ ಸಿದ್ದರಾಮಯ್ಯ title=

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. 

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ರಾಹುಲ್​ ಗಾಂಧಿ ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ. ಅಮೇಥಿಯಿಂದಲೇ ಕಣಕ್ಕಿಳಿಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ರಮೇಶ್​ ಜಾರಕಿಹೊಳಿ, ಬಿ.ಸಿ.ಪಾಟೀಲ್​ ಅಸಮಾಧಾನಗೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಚಾರದಲ್ಲಿ ಅಸಮಾಧಾನವಾಗುವುದು ಸಹಜ. ನಾನು ಮಾತುಕತೆ ನಡೆಸುತ್ತೇನೆ.ಆದರೆ ಈ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದರು. 
 

Trending News