ಪ್ರಧಾನಿ ಮೋದಿ 'ಮಿಷನ್ ಶಕ್ತಿ' ಘೋಷಣೆ ನಂತರ ರಂಗಭೂಮಿ ದಿನದ ಶುಭಾಶಯ ಕೋರಿದ ರಾಹುಲ್ ಗಾಂಧಿ

ಪ್ರಧಾನಿ ಮೋದಿ ಮಿಷನ್ ಶಕ್ತಿ ಯಶಸ್ಸಿನ ಕುರಿತು ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೋದಿಗೆ ವಿಶ್ವ ರಂಗಭೂಮಿ ದಿನದ ಶುಭಾಶಯಗಳನ್ನು ಕೋರಿದ್ದಾರೆ. 

Last Updated : Mar 27, 2019, 02:35 PM IST
ಪ್ರಧಾನಿ ಮೋದಿ 'ಮಿಷನ್ ಶಕ್ತಿ' ಘೋಷಣೆ ನಂತರ ರಂಗಭೂಮಿ ದಿನದ ಶುಭಾಶಯ ಕೋರಿದ ರಾಹುಲ್ ಗಾಂಧಿ  title=

ನವದೆಹಲಿ: ಪ್ರಧಾನಿ ಮೋದಿ ಮಿಷನ್ ಶಕ್ತಿ ಯಶಸ್ಸಿನ ಕುರಿತು ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೋದಿಗೆ ವಿಶ್ವ ರಂಗಭೂಮಿ ದಿನದ ಶುಭಾಶಯಗಳನ್ನು ಕೋರಿದ್ದಾರೆ. 

ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಭಾರತದ ವಿಜ್ಞಾನಿಗಳು ಲೈವ್ ಉಪಗ್ರಹವನ್ನು ಅಂತರಿಕ್ಷದಲ್ಲಿ ಹೊಡೆದುರುಳಿಸುವ ಮೂಲಕ ಅಮೇರಿಕಾ, ರಷ್ಯಾ, ಚೀನಾ ಸಾಲಿಗೆ ಭಾರತ ಸೇರ್ಪಡೆಯಾದ ವಿಷಯವನ್ನು ಪ್ರಸ್ತಾಪಿಸಿದರು. ಚುನಾವಣೆಗೆ ಇನ್ನು ಕೆಲವೇ ದಿನಗಳ ಬಾಕಿ ಇರುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರ ಘೋಷಣೆ ಹೊರಬಿದ್ದಿದೆ.ಈ ಹಿನ್ನಲೆಯಲ್ಲಿ ಈ ನಡೆ ಈಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ಈಗ ವಿಜ್ಞಾನಿಗಳ ಪ್ರಯತ್ನವನ್ನು ಶ್ಲಾಘಿಸಿದ ರಾಹುಲ್ ಗಾಂಧಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಇದೇ ವೇಳೆ ಮೋದಿ ಘೋಷಣೆಯನ್ನು ರಾಜಕೀಕರಣಗೊಳಿಸಿರುವ ಕ್ರಮವನ್ನು ವ್ಯಂಗ್ಯವಾಡುತ್ತಾ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ವಿಶ್ವ ರಂಗಭೂಮಿ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಎಪ್ರಿಲ್-ಮೇ ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಇರುವುದರಿಂದ ಈಗ ದೇಶದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನಲೆಯಲ್ಲಿ ಈಗ ಪ್ರಧಾನಿ ಮೋದಿ ಘೋಷಣೆ ಮಾಡಿರುವ ನಡೆಯನ್ನು ಪ್ರತಿಪಕ್ಷಗಳು ಖಂಡಿಸಿವೆ.

 

Trending News