RRB JE Recruitment 2024 Notification: ಉದ್ಯೋಗಾಂಕ್ಷಿಗಳಿಗೆ ರೈಲ್ವೆ ನೇಮಕಾತಿ ಮಂಡಳಿ ಸಿಹಿ ಸುದ್ದಿ ನೀಡಿದ್ದು, ಖಾಲಿ ಇರುವ 7,911 ಜೆಇ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ ಮತ್ತು ಅರ್ಹತೆಯ ಮಾನದಂಡಗಳ ಸಂಪೂರ್ಣ ವಿವರ ನಿಮಗಾಗಿ.. ಇಲ್ಲಿದೆ..


COMMERCIAL BREAK
SCROLL TO CONTINUE READING

ರೈಲ್ವೆ ನೇಮಕಾತಿ ಮಂಡಳಿ (RRB) JE ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯ ಮೂಲಕ 7,911 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದರಲ್ಲಿ ಜೂನಿಯರ್ ಇಂಜಿನಿಯರ್ (Safety, non-safety), ಡಿಪೋ ಮೆಟೀರಿಯಲ್ ಸೂಪರಿಂಟೆಂಡೆಂಟ್ (DMS), ಕೆಮಿಕಲ್ ಮತ್ತು ಮೆಟಲರ್ಜಿಕಲ್ ಸೂಪರ್ ವೈಸರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.


ಇದನ್ನೂ ಓದಿ:ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಪಘಾತ: 19 ರೈಲುಗಳ ಸಂಚಾರ ರದ್ದು


ಖಾಲಿ ಹುದ್ದೆಗಳ ವಿವರಗಳು - ರೈಲ್ವೆ ನೇಮಕಾತಿ ಮಂಡಳಿ (RRB) JE 7,911 ಹುದ್ದೆಗಳ ಭರ್ತಿ. 


ಅರ್ಹತೆ - ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಪಾಸಾಗಿರಬೇಕು. ಅಥವಾ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಡಿಪ್ಲೊಮಾ ಪಡೆದಿರಬೇಕು.


ಅರ್ಜಿ ಸಲ್ಲಿಸುವುದು ಹೇಗೆ - ಅಧಿಕೃತ ಪ್ರಕಟಣೆಯ ನಂತರ, ಈ ಪೋಸ್ಟ್‌ಗಳ ಭರ್ತಿಯನ್ನು ಆನ್‌ಲೈನ್‌ನಲ್ಲಿ ಮಾತ್ರ ಮಾಡಲಾಗುತ್ತದೆ. RRB ಅಧಿಕೃತ ವೆಬ್‌ಸೈಟ್ rrbcdg.gov.in ಅಧಿಸೂಚನೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಒಳಗೊಂಡಿದೆ.


ಅರ್ಜಿ ಸಲ್ಲಿಸುವ ವಿಧಾನ 
ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು RRB ಅಧಿಕೃತ ವೆಬ್‌ಸೈಟ್ rrbcdg.gov.in ಭೇಟಿ ನೀಡಿ.
ಮುಖಪುಟದಲ್ಲಿ JE ನೋಂದಣಿ 2024 ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಿಮ್ಮ ವಿವರಗಳನ್ನು ನಮೂದಿಸಿ.
ಪ್ರತಿಯ ಪ್ರಿಂಟ್ ಔಟ್ ತೆಗೆದುಕೊಳ್ಳಿ.


ಆಯ್ಕೆ ಪ್ರಕ್ರಿಯೆ - ಈ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯನ್ನು ಎರಡು ರೀತಿಯಲ್ಲಿ ಮಾಡಲಾಗುತ್ತದೆ. ಒಂದು ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT1&2) ನಂತರ ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ. ಆಸಕ್ತ ಅಭ್ಯರ್ಥಿಗಳು ಕಾಲಕಾಲಕ್ಕೆ ರೈಲ್ವೇ ನೇಮಕಾತಿ ಮಂಡಳಿಯ ಅಧಿಕೃತ ವೆಬ್‌ಸೈಟ್ ಅನ್ನು ಪರಿಶೀಲಿಸಬೇಕು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.