Rain Alert: ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ: ಈ ಜಿಲ್ಲೆಗಳಲ್ಲಿ ಬಿರುಗಾಳಿಯ ಮುನ್ನೆಚ್ಚರಿಕೆ-ರೆಡ್ ಅಲರ್ಟ್ ಘೋಷಣೆ

Karnataka News: ಮುಂದಿನ ಎರಡು ದಿನಗಳ ಕಾಲ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಕೊಂಕಣ ಮತ್ತು ಮಧ್ಯ ಮಹಾರಾಷ್ಟ್ರಕ್ಕೆ 'ರೆಡ್' ಅಲರ್ಟ್ ಘೋಷಣೆ ಮಾಡಲಾಗಿದೆ.  

Written by - Bhavishya Shetty | Last Updated : Jul 26, 2023, 12:13 PM IST
    • ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ
    • 200 ಮಿ.ಮೀ.ಗೂ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.
    • ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.
Rain Alert: ರಾಜ್ಯದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ: ಈ ಜಿಲ್ಲೆಗಳಲ್ಲಿ ಬಿರುಗಾಳಿಯ ಮುನ್ನೆಚ್ಚರಿಕೆ-ರೆಡ್ ಅಲರ್ಟ್ ಘೋಷಣೆ title=
Karnataka Weather Report

Karnataka Rain Alert July 27, 2023: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ, ಮುಂದಿನ 24 ಗಂಟೆಗಳ ಕಾಲ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಮುಂದಿನ ಎರಡು ದಿನಗಳ ಕಾಲ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ದಕ್ಷಿಣ ಕೊಂಕಣ ಮತ್ತು ಮಧ್ಯ ಮಹಾರಾಷ್ಟ್ರಕ್ಕೆ 'ರೆಡ್' ಅಲರ್ಟ್ ಘೋಷಣೆ ಮಾಡಲಾಗಿದೆ.  

ಇದನ್ನೂ ಓದಿ: Most Popular Heroines: 10ನೇ ಸ್ಥಾನಕ್ಕಿಳಿದ ರಶ್ಮಿಕಾ! ಭಾರತದ ನಂ.1 ಪಾಪ್ಯುಲರ್ ನಟಿ ಯಾರು ಗೊತ್ತಾ?

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ 200 ಮಿ.ಮೀ.ಗೂ ಅಧಿಕ ಮಳೆಯಾಗುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಅಷ್ಟೇ ಅಲ್ಲದೆ, ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈ ಪ್ರದೇಶದಲ್ಲಿ ಜನಜೀವನದ ಮೇಲೆ ಪರಿಣಾಮ ಬೀರಿದೆ. ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ರಜೆ ಘೋಷಣೆ:

ಮತ್ತೊಂದೆಡೆ ಅತಿ ಮಳೆಯ ಪರಿಣಾಮ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಕೊಡಗು, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಹಾಸನ, ಶಿವಮೊಗ್ಗ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಹವಾಮಾನ ಇಲಾಖೆಯಿಂದ ಕರಾವಳಿ ಪ್ರದೇಶದಲ್ಲಿ ವಾಸಿಸುವ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದ್ದು, ಜಲಾವೃತವಾಗಿರುವ ಪ್ರದೇಶಗಳಿಂದ ತೆರವುಗೊಳಿಸುವಂತೆ ಮನವಿ ಮಾಡಲಾಗಿದೆ.

ವರದಿಗಳ ಪ್ರಕಾರ, ಕರ್ನಾಟಕದಲ್ಲಿ ಮಳೆಯಿಂದಾಗಿ ಮೂರು ಮಂದಿ ಸಾವನ್ನಪ್ಪಿದ್ದಾರೆ. ಅದರಲ್ಲಿ 12 ವರ್ಷದ ಬಾಲಕಿ ರಚನಾ ಎಂಬಾಕೆ ಭಾನುವಾರ ಹೊಳೆಯಲ್ಲಿ ಕೊಚ್ಚಿಹೋಗಿದ್ದರೆ, ಸೋಮವಾರ ಕುಂದಾಪುರ ತಾಲೂಕಿನ ಗೋಕುಲದಾಸ್ ಪ್ರಭು (53) ಹೊಳೆಗೆ ಬಿದ್ದು ಮೃತಪಟ್ಟಿದ್ದಾರೆ. ಇನ್ನು ಅದೇ ದಿನ ಕಲಬುರಗಿ ಜಿಲ್ಲೆಯ ಬಸಮ್ಮ ಬಸವರಾಜ (53) ಎಂಬಾಕೆ ಮನೆ ಕುಸಿದು ಮೃತಪಟ್ಟಿದ್ದಾರೆ.

ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಅಪಾಯದ ಮಟ್ಟ ಮೀರಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸ್ನಾನಘಟ್ಟಕ್ಕೆ ಭೇಟಿ ನೀಡುವ ಭಕ್ತರು ಮಳೆ ಕಡಿಮೆಯಾಗುವವರೆಗೆ ದೇಗುಲಕ್ಕೆ ಭೇಟಿ ನೀಡದಂತೆ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೊಂದೆಡೆ ಶೃಂಗೇರಿಯಲ್ಲಿ ತುಂಗಾ ನದಿಯು ಸಹ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.

ಚಿಕ್ಕಮಗಳೂರಿನ ಕಲ್ಲತ್ತಿಗಿರಿ ಜಲಪಾತದಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಪಾತಕ್ಕೆ ಪ್ರವೇಶ ನಿಷೇಧಿಸಲಾಗಿದೆ. ಇನ್ನೊಂದೆಡೆ ದತ್ತಪಾದ ರಸ್ತೆ ಬಳಿ ಭೂಕುಸಿತ ಸಂಭವಿಸಿದೆ.

ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಚಿಕ್ಕೋಡಿ ತಾಲೂಕಿನ ನರಸಿಂಹ ವಾಡಿಯ ಶ್ರೀ ಕ್ಷೇತ್ರದ ದತ್ತ ದೇವಸ್ಥಾನ ಮುಳುಗಡೆಯಾಗಿದೆ. ಹಾಸನದಲ್ಲಿ ಸೋಮವಾರಪೇಟೆ-ಮಾಗೇರಿ ನಡುವೆ ಸಂಪರ್ಕ ಕಲ್ಪಿಸುವ ಸೇತುವೆಯೊಂದು ಮುಳುಗಡೆಯಾಗಿದ್ದು, ಬೈಕ್ ಸವಾರನೊಬ್ಬ ಸಿಲುಕಿಕೊಂಡಿದ್ದನು. ಬಳಿಕ ಸ್ಥಳೀಯರು ಆತನನ್ನು ರಕ್ಷಿಸಿದ್ದಾರೆ.

ಇದನ್ನೂ ಓದಿ: ಈ ರಾಶಿಗೆ ಸಕಲ ಸಂಪತ್ತು ನೀಡಲು ಕಾಯುತ್ತಿದ್ದಾನೆ ಶನಿ: ಇನ್ನೆರಡು ವರ್ಷ ನಿರಂತರ ಹಣ ಮಳೆ–ಯಶಸ್ಸು ಸರ್ವಖಚಿತ!

ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಬೆಳಗಾವಿಯಲ್ಲಿ ಕನಿಷ್ಠ ಐದು ಸೇತುವೆಗಳು ಮುಳುಗಡೆಯಾಗಿವೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News