All India Rain Update-Karnataka Rain Alert: ಹಿಮಾಚಲ ಪ್ರದೇಶದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಭೂಕುಸಿತ ಸಂಭವಿಸಿದ್ದು ನಾಲ್ವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಜೊತೆಗೆ ಹಲವಾರು ಮನೆಗಳಿಗೆ ಹಾನಿಯಾಗಿದ್ದು, ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 200ಕ್ಕೂ ಹೆಚ್ಚು ರಸ್ತೆಗಳು ಬಂದ್‌ ಆಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ರಾಜ್ಯದ 12 ಜಿಲ್ಲೆಗಳ ಪೈಕಿ ನಾಲ್ಕರಲ್ಲಿ ಭಾರಿ ಮಳೆಯಾಗಲಿದ್ದು, ಮುಂದಿನ 24 ಗಂಟೆಗಳಲ್ಲಿ ಕೆಲವೆಡೆ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಈ ರಾಶಿಗಳ ಮೇಲೆ ಸಿರಿ-ಸಂಪತ್ತಿನ ಮಳೆ ಹರಿಸಲಿದ್ದಾನೆ ಸೂರ್ಯದೇವ: ಮುಂದಿನ 30 ದಿನ ಹಣ, ಪ್ರಗತಿ, ಖ್ಯಾತಿಗಿರಲ್ಲ ಎಳ್ಳಷ್ಟೂ ಬರ!


4 ಜಿಲ್ಲೆಗಳಿಗೆ ಇಂದು ರೆಡ್ ಅಲರ್ಟ್:


ಹವಾಮಾನ ಇಲಾಖೆ (ಕಂಗ್ರಾ, ಕುಲು, ಮಂಡಿ ಮತ್ತು ಶಿಮ್ಲಾ ಜಿಲ್ಲೆಗಳ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಆಗಸ್ಟ್ 24 ರಂದು ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯನ್ನು ಇಲಾಖೆ ನೀಡಿದ್ದು, ಕೆಲ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಮಳೆ ಸಂಬಂಧಿತ ಘಟನೆಗಳಲ್ಲಿ ಈ ತಿಂಗಳು ರಾಜ್ಯದಲ್ಲಿ ಸುಮಾರು 80 ಜನರು ಸಾವನ್ನಪ್ಪಿದ್ದಾರೆ. ಜೂನ್ 24 ರಂದು ರಾಜ್ಯದಲ್ಲಿ ಮುಂಗಾರು ಪ್ರಾರಂಭವಾದಾಗಿನಿಂದ ಒಟ್ಟು 227 ಜನರು ಸಾವನ್ನಪ್ಪಿದ್ದು, 38 ಜನರು ನಾಪತ್ತೆಯಾಗಿದ್ದಾರೆ.


10 ದಿನಗಳ ಮಳೆ-26 ಮಂದಿ ಸಾವು:


ಕಳೆದ ಹತ್ತು ದಿನಗಳಲ್ಲಿ ಸುರಿದ ಭಾರೀ ಮಳೆ ಪರಿಣಾಮವಾಗಿ ನಡೆದ ದುರ್ಘಟನೆಗಳಲ್ಲಿ ಶಿಮ್ಲಾ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 26 ಕ್ಕೆ ಏರಿದೆ. ಈ ಪೈಕಿ ಸಮ್ಮರ್ ಹಿಲ್ ಪ್ರದೇಶದಲ್ಲಿ ಭೂಕುಸಿತದಿಂದ 17 ಮಂದಿ ಸಾವನ್ನಪ್ಪಿದ್ದರೆ, ಫಾಗ್ಲಿಯಲ್ಲಿ ಐವರು ಮತ್ತು ಕೃಷ್ಣ ನಗರದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಶಿಮ್ಲಾ, ಮಂಡಿ ಮತ್ತು ಸೋಲನ್ ಜಿಲ್ಲೆಗಳಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸೋಲನ್ ಜಿಲ್ಲೆಯಲ್ಲಿ ಭೂಕುಸಿತದಿಂದಾಗಿ ಕೆಲವು ಮನೆಗಳಿಗೂ ಹಾನಿಯಾಗಿದೆ.


ಮಾನ್ಸೂನ್ ಮತ್ತೆ ಸಕ್ರಿಯ!


ಕಳೆದ 24 ಗಂಟೆಗಳಲ್ಲಿ, ಉತ್ತರ ಪ್ರದೇಶ ಮತ್ತು ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ರಾಜಸ್ಥಾನ ಮತ್ತು ಹಿಮಾಚಲ ಪ್ರದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಧ್ಯ ಭಾರತ ಮತ್ತು ದಕ್ಷಿಣ ಭಾರತದ ಅಲ್ಲಲ್ಲಿ ಮಳೆಯಾಗಿದೆ ಎಂದು ತಿಳಿದುಬಂದಿದೆ. ಕೊಂಕಣ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ, ಮಧ್ಯಪ್ರದೇಶ, ಉತ್ತರಾಖಂಡ, ಪಶ್ಚಿಮ ಬಂಗಾಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಿದೆ.


ಇಂದಿನ ಹವಾಮಾನ ಹೇಗಿರಲಿದೆ?


ಖಾಸಗಿ ಹವಾಮಾನ ಸಂಸ್ಥೆ ಸ್ಕೈಮೆಟ್ ಪ್ರಕಾರ, ಇಂದು ದಕ್ಷಿಣ ಭಾರತ, ಮಹಾರಾಷ್ಟ್ರ ಮತ್ತು ಪಶ್ಚಿಮ ಮಧ್ಯಪ್ರದೇಶದಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಏಜೆನ್ಸಿ ಪ್ರಕಾರ, ಮುಂದಿನ 24 ಗಂಟೆಗಳಲ್ಲಿ ಈಶಾನ್ಯ ಭಾರತ, ಉತ್ತರಾಖಂಡ, ಜಾರ್ಖಂಡ್, ಬಿಹಾರ, ಪಶ್ಚಿಮ ಬಂಗಾಳ, ಉತ್ತರ ಪ್ರದೇಶ, ಕೊಂಕಣ ಮತ್ತು ಗೋವಾದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಬಹುದು.


ಕರ್ನಾಟಕ ಮಳೆ ಅಪ್ಡೇಟ್:


ಭಾರತೀಯ ಹವಾಮಾನ ಇಲಾಖೆ ಪ್ರಕಾರ ಕರಾವಳಿ ಕರ್ನಾಟಕದಲ್ಲಿ ಭಾನುವಾರದವರೆಗೆ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕೆಲ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಸಂಸ್ಥೆ ತಿಳಿಸಿದೆ.


ಇದನ್ನೂ ಓದಿ: ವರಲಕ್ಷ್ಮೀ ಹಬ್ಬದ ಮುನ್ನಾದಿನ ಈ ರಾಶಿಗೆ ಒಲಿದ ಧನಲಕ್ಷ್ಮೀ: ಇಂದು ಕೈತುಂಬಾ ದುಡ್ಡು


ಇನ್ನು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಆಗಸ್ಟ್ 25 ರಿಂದ 28 ವರೆಗೆ ಮೋಡಕವಿದ ವಾತಾವರಣ ಇರಲಿದ್ದು, ಇಂದು ಬೆಳಗ್ಗೆ ವೇಳೆಗೆ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು IMD ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ