ನವದೆಹಲಿ: ರಾಷ್ಟ್ರ ರಾಜಧಾನಿ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ಭಾನುವಾರ ಬೆಳಿಗ್ಗೆ ಮಳೆಯಾಗಿದೆ. ಇದರಿಂದಾಗಿ ಬಿಸಿಲಿನ ಧಗೆಯಿಂದ ಬೆಂದಿದ್ದ ಜನತೆಗೆ ತಂಪೆರೆದಂತಾಗಿದೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಕನಿಷ್ಠ ತಾಪಮಾನ 24°C ದಾಖಲಿಸಲಾಗಿದ್ದು, ಗರಿಷ್ಠ ತಾಪಮಾನವು 32° C ವರೆಗೆ ತಲುಪುವ ಸಾಧ್ಯತೆಯಿದೆ. ಕಳೆದ 24 ಗಂಟೆಗಳಲ್ಲಿ 8.7 ಮಿ.ಮೀ ಮಳೆಯಾಗಿರುವ ಬಗ್ಗೆ ಸಫ್ದರ್‌ಜಂಗ್‌ನ ಹವಾಮಾನ ಕೇಂದ್ರದಲ್ಲಿ ದಾಖಲಾಗಿದೆ. ಪಾಲಂ ಮತ್ತು ಲೋಧಿ ರಸ್ತೆ ಹವಾಮಾನ ಕೇಂದ್ರಗಳಲ್ಲಿ ಕ್ರಮವಾಗಿ 7.8 ಮಿ.ಮೀ ಮತ್ತು 9.4 ಮಿ.ಮೀ ಮಳೆಯಾಗಿದ್ದರೆ, ಅಯನಗರ ವೀಕ್ಷಣಾಲದಲ್ಲಿ 11.7 ಮಿ.ಮೀ ಮಳೆಯಾಗಿರುವ ಬಗ್ಗೆ ದಾಖಲಾಗಿದೆ.


ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಆರೆಂಜ್ ಅಲರ್ಟ್ ಸಹ ಘೋಷಿಸಿದೆ.