Karnataka Rain Alert: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಉತ್ತರ ಭಾರತ, ದಕ್ಷಿಣ ಭಾರತದ ಜನರು ಬಿಸಿಲಿನ ಬೇಗೆಗೆ ಬಳಲಿ ಬೆಂಡಾಗಿ ಹೋಗಿದ್ದಾರೆ. ಈ ಮಧ್ಯೆ ಮುಂದಿನ 48 ಗಂಟೆಗಳಲ್ಲಿ ಚಿಕ್ಕಮಗಳೂರು, ಕೊಡಗು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಇದ್ದು, ಗರಿಷ್ಠ ಉಷ್ಣಾಂಶವು ಕರಾವಳಿಯ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್’​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.


ಇದನ್ನೂ ಓದಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದ ಕ್ಯಾಬ್ ಡ್ರೈವರ್


ಇನ್ನೊಂದೆಡೆ ಉತ್ತರಾಖಂಡದ ಹವಾಮಾನದ ಪ್ರಕಾರ, ಮುಂದಿನ 72 ಗಂಟೆಗಳ ಕಾಲ ಪರ್ವತಗಳಿಂದ ಬಯಲು ಸೀಮೆಯವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 19 ರಿಂದ ಏಪ್ರಿಲ್ 21 ರವರೆಗೆ ಜಿಲ್ಲೆಗಳಲ್ಲಿ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.  


ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ:


ಕೆಲವೆಡೆ ಭಾರೀ ಮಳೆ ಹಾಗೂ ಆಲಿಕಲ್ಲು ಮಳೆಯೊಂದಿಗೆ ಗಂಟೆಗೆ 50 ರಿಂದ 70 ಕಿಲೋಮೀಟರ್ ವೇಗದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.


ಈ ಜಿಲ್ಲೆಗಳಲ್ಲಿ ಮಳೆ:


ಉತ್ತರಾಖಂಡದ ಪಿಥೋರಗಢ್, ಬಾಗೇಶ್ವರ್, ಚಮೋಲಿ, ಉತ್ತರಕಾಶಿ ಮತ್ತು ರುದ್ರಪ್ರಯಾಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಿಂಚು, ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ.


ದೆಹಲಿಯಲ್ಲಿ ಮಳೆ!


ಬುಧವಾರದಂದು ರಾಷ್ಟ್ರ ರಾಜಧಾನಿಯಲ್ಲಿ ಗುಡುಗು ಸಹಿತ ಗಾಳಿ ಮತ್ತು ಲಘು ಮಳೆಯು ಗರಿಷ್ಠ ತಾಪಮಾನವನ್ನು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌’ಗೆ ಇಳಿಸುವ ನಿರೀಕ್ಷೆಯಿದೆ, ಇದು ಬಿಸಿಲಿನ ತಾಪದಿಂದ ಜನರಿಗೆ ಸ್ವಲ್ಪ ರಿಲೀಫ್ ನೀಡಬಹುದು. ದೆಹಲಿಯ ಮುಖ್ಯ ಹವಾಮಾನ ಕೇಂದ್ರ ಸಫ್ದರ್‌ಜಂಗ್ ವೀಕ್ಷಣಾಲಯವು ಬುಧವಾರ ಬೆಳಿಗ್ಗೆ ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಇದು ಸಾಮಾನ್ಯಕ್ಕಿಂತ ಎರಡು ಡಿಗ್ರಿ ಹೆಚ್ಚಾಗಿದೆ.


ಇದನ್ನೂ ಓದಿ: Viral News : ಕುಡಿದ ಮತ್ತಿನಲ್ಲಿ ಎಲ್ಲಾ ಬಟ್ಟೆ ಬಿಚ್ಚಿದ ಮೇಯರ್‌


ರಾಜಸ್ಥಾನದಲ್ಲಿ ಚಂಡಮಾರುತ!


ರಾಜಸ್ಥಾನದ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ ಸೂರತ್‌ಗಢದಲ್ಲಿ ಗರಿಷ್ಠ 19 ಮಿ.ಮೀ ಮಳೆಯಾಗಿದೆ. ಜೈಪುರದ ಹವಾಮಾನ ಕೇಂದ್ರದ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಜೋಧ್‌ಪುರ, ಬಿಕಾನೇರ್ ವಿಭಾಗದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.