ರಾಜ್ಯದ 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಧಾರಾಕಾರ ಮಳೆ: ಮಿಂಚು, ಗುಡುಗು, ಗಾಳಿ ಸಹಿತ ಜಲಪ್ರವಾಹದ ಮುನ್ನೆಚ್ಚರಿಕೆ
Weather Update Today: ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ದೆಹಲಿ-ಎನ್’ಸಿಆರ್’ನಲ್ಲಿ ಮೋಡ ಕವಿದ ವಾತಾವರಣ ಇದೆ. ಜೊತೆಗೆ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ದೆಹಲಿ-ಎನ್’ಸಿಆರ್’ನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Weather Update Today: ಹವಾಮಾನ ಬದಲಾವಣೆಯಿಂದಾಗಿ ಉತ್ತರ ಭಾರತದ ಹಲವೆಡೆ ಮೋಡ ಕವಿದ ವಾತಾವರಣವಿದೆ. ಯುಪಿ, ಬಿಹಾರ, ರಾಜಸ್ಥಾನ ಮತ್ತು ಉತ್ತರಾಖಂಡ ಸೇರಿದಂತೆ ದೆಹಲಿ-ಎನ್’ಸಿಆರ್’ನಲ್ಲಿ ಮಳೆಯಿಂದಾಗಿ ಹವಾಮಾನ ಆಹ್ಲಾದಕರವಾಗಿದೆ.
ಇದನ್ನೂ ಓದಿ: 'ಭಾರತದ ಅಳಿಯ' ಬ್ರಿಟನ್ ಪ್ರಧಾನಿ ರಿಷಿ ಸುನಕ್’ರನ್ನು ಪ್ರೀತಿಯಿಂದ ತಬ್ಬಿಕೊಂಡ ಪಿಎಂ ಮೋದಿ: ವಿಡಿಯೋ
ಹವಾಮಾನ ಇಲಾಖೆ (ಐಎಂಡಿ) ಪ್ರಕಾರ, ದೆಹಲಿ-ಎನ್’ಸಿಆರ್’ನಲ್ಲಿ ಮೋಡ ಕವಿದ ವಾತಾವರಣ ಇದೆ. ಜೊತೆಗೆ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ದೆಹಲಿ-ಎನ್’ಸಿಆರ್’ನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಖಾಸಗಿ ಹವಾಮಾನ ವೆಬ್’ಸೈಟ್ ಸ್ಕೈಮೆಟ್ ವೆದರ್ ಪ್ರಕಾರ, ಇಂದು ರಾಯಲಸೀಮಾ ಮತ್ತು ದೆಹಲಿ-ಎನ್’ಸಿಆರ್’ನಲ ಒಂದೆರಡು ಸ್ಥಳಗಳ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ, ಉತ್ತರ ಕೊಂಕಣ, ಗೋವಾ ಮತ್ತು ನೈಋತ್ಯ ಮಧ್ಯಪ್ರದೇಶದ ಭಾಗಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಬಹುದು. ಛತ್ತೀಸ್’ಗಢ, ಉತ್ತರ ಪ್ರದೇಶ, ವಿದರ್ಭ, ಮಧ್ಯಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾದ ಕೆಲವು ಭಾಗಗಳು, ಪೂರ್ವ ಗುಜರಾತ್ ಮತ್ತು ತಮಿಳುನಾಡಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕ ಹವಾಮಾನ ವರದಿ:
ಇನ್ನು ಕರ್ನಾಟಕದಲ್ಲೂ ಮುಂದಿನ 4 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕೊಡಗು, ಬೀದರ್, ಚಿಕ್ಕಮಗಳೂರು, ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ನೆಚ್ಚರಿಕೆ ನೀಡಲಾಗಿದೆ.
ಇನ್ನೊಂದೆಡೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದು ವರುಣನ ಸಿಂಚನವಾಗಲಿದೆ. ಇನ್ನೂ ಕೆಲ ಜಿಲ್ಲೆಗಳಲ್ಲಿ ಗುಡುಗು ಮಿಂಚು ಇರಲಿದೆ.
ಇದನ್ನೂ ಓದಿ: ಜಿ-20 : ಪ್ರಧಾನಿ ಮೋದಿ ವಿಶ್ವ ನಾಯಕರ ಸ್ವಾಗತದಲ್ಲಿ ಹಸ್ತಲಾಘವದ ಹಿನ್ನೆಲೆಯಾಗಿ ಕೋನಾರ್ಕ್ ಚಕ್ರ
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಹಾಗೆಯೇ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.