ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕರೋನಾ ಕರಿಛಾಯೆ ! ತುರ್ತು ಸಭೆ ಕರೆದ ಆರೋಗ್ಯ ಇಲಾಖೆ

Coronavirus latest update : ಬುಧವಾರ ಬಿಡುಗಡೆಯಾದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ನಿಂದ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದೀಗ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇಕಡಾ 13.89 ರಷ್ಟಿದೆ.  

Written by - Ranjitha R K | Last Updated : Mar 30, 2023, 10:23 AM IST
  • ದೆಹಲಿಯಲ್ಲಿ ಮತ್ತೊಮ್ಮೆ ಕರೋನವೈರಸ್ ಪ್ರಕರಣಗಳಲ್ಲಿ ಏರಿಕೆ
  • 6 ತಿಂಗಳ ನಂತರ ಮತ್ತೆ ಕರೋನಾ ಪ್ರಕರಣಗಳಲ್ಲಿ ಹೆಚ್ಚಳ
  • ಅಧಿಕಾರಿಗಳೊಂದಿಗೆ ಆರೋಗ್ಯ ಇಲಾಕೆ ತುರ್ತು ಸಭೆ
ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕರೋನಾ ಕರಿಛಾಯೆ ! ತುರ್ತು ಸಭೆ ಕರೆದ ಆರೋಗ್ಯ ಇಲಾಖೆ  title=

Coronavirus latest update : ದೆಹಲಿಯಲ್ಲಿ ಮತ್ತೊಮ್ಮೆ ಕರೋನವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ.   ಸುಮಾರು 6 ತಿಂಗಳ ನಂತರ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆ 300 ದಾಟಿದೆ. ಬುಧವಾರ ಬಿಡುಗಡೆಯಾದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಕೋವಿಡ್ -19 ನಿಂದ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಇದೀಗ ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇಕಡಾ 13.89 ರಷ್ಟಿದೆ. ಈ 300 ಹೊಸ ಕರೋನಾ ಪ್ರಕರಣ ಪತ್ತೆಯಾದ ನಂತರ, ನಗರದಲ್ಲಿ  ಕರೋನಾ ರೋಗಿಗಳ ಸಂಖ್ಯೆ ಸುಮಾರು 900 ಕ್ಕೆ ಏರಿದೆ. ಇದೇ ವೇಳೆ ಆರೋಗ್ಯ ಇಲಾಖೆಯ ವತಿಯಿಂದ 2,160 ಪರೀಕ್ಷೆಗಳನ್ನು ಮಾಡಿಸಲಾಗಿದೆ. ಕರೋನಾ ಪ್ರಕರಣಗಳು ಹೆಚ್ಚಾಗುತ್ತಿರುವಂತೆಯೇ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ತುರ್ತು ಸಭೆ ಕರೆದಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ : 
ಇಂದು ಮಧ್ಯಾಹ್ನ ಆರೋಗ್ಯ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳು ಮತ್ತು ತಜ್ಞ ವೈದ್ಯರೊಂದಿಗೆ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಮಹತ್ವದ ಸಭೆ ನಡೆಸಲಿದ್ದಾರೆ. ಆರೋಗ್ಯ ಇಲಾಖೆ ಕೈಗೊಂಡಿರುವ  ಸಿದ್ಧತೆ ಮತ್ತು ದೆಹಲಿಯ ಎಲ್ಲಾ ಆಸ್ಪತ್ರೆ ಮಾಡಿಕೊಂಡಿರುವ ತಯಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. 

ಇದನ್ನೂ ಓದಿ : ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರದ ಉಪಚುನಾವಣೆಯ ಕುರಿತು ಚುನಾವಣಾ ಆಯೋಗ ಹೇಳಿದ್ದೇನು?

ಮತ್ತೆ ಆತಂಕ ಹೆಚ್ಚಿಸಿದ ಕರೋನಾ : 
ಕಳೆದ ಕೆಲವು ದಿನಗಳಿಂದ ಕರೋನಾ ಸೋಂಕಿತರ ಸಂಖ್ಯೆ ಅನಿರೀಕ್ಷಿತವಾಗಿ ಹೆಚ್ಚುತ್ತಿದೆ. ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ. ಈ ಅಪಾಯವನ್ನು ಮನಗಂಡು ಕೇಂದ್ರ ಸರ್ಕಾರ ಕೂಡಾ ಕಾರ್ಯಪ್ರವೃತ್ತವಾಗಿದೆ. ದೆಹಲಿಯಲ್ಲಿ ಕರೋನಾ ಸೋಂಕಿನ ಪ್ರಮಾಣ ಹೆಚ್ಚಳವನ್ನು ಹಿಂದಿನ ಅಲೆಯೊಂದಿಗೆ ಹೋಲಿಸಲಾಗುವುದಿಲ್ಲ ಎಂದು ಈ ಹಿಂದೆ ದೆಹಲಿ ಸರ್ಕಾರ ಹೇಳಿತ್ತು. ಕೇಂದ್ರ ಬಿಡುಗಡೆ ಮಾಡಿರುವ ಅಡ್ವೈಸರಿಯಲ್ಲಿ ಆರು ರಾಜ್ಯಗಳನ್ನು ಉಲ್ಲೇಖಿಸಲಾಗಿದೆ. ಆದರೆ ಈ ಆರು ರಾಜ್ಯಗಳಲ್ಲಿ ದೆಹಲಿ ಇಲ್ಲ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದರು. 

ಕೊರೊನಾ ಟ್ರೆಂಡ್ ಬಂದಾಗಲೆಲ್ಲಾ ದೆಹಲಿಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಸಲಹೆಯನ್ನು ಕಳುಹಿಸಲಾಗಿದೆ. ಆಕ್ಸಿಜನ್ ಪೂರೈಕೆ, ವೆಂಟಿಲೇಟರ್ ಇತ್ಯಾದಿ ಸೇವೆಗಳು ಯಾವ ಸಮಯಕ್ಕೆ ಬೇಕಾದರೂ  ತಯಾರಿರುವಂತೆ ನೋಡಿಕೊಳ್ಳಲು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ. 

ಇದನ್ನೂ ಓದಿ : ರಾಹುಲ್ ಗಾಂಧಿ ಪ್ರತಿನಿಧಿಸುತ್ತಿದ್ದ ವಯನಾಡಲ್ಲಿ ಸದ್ಯಕ್ಕಿಲ್ಲ ಲೋಕಸಭಾ ಉಪಚುನಾವಣೆ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News