ಥಾಣೆ: ಮಹಾರಾಷ್ಟ್ರದ ಥಾಣೆಯಲ್ಲಿ ಮಂಗಳವಾರ ನಡೆದ ಸಾರ್ವಜನಿಕ ರ್‍ಯಾಲಿಯಲ್ಲಿ ಕತ್ತಿ ಹಿಡಿದ ಆರೋಪದ ಮೇರೆಗೆ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 4 ಮತ್ತು 25 ರಡಿ ರಾಜ್ ಠಾಕ್ರೆ ಮತ್ತು ಎಂಎನ್‌ಎಸ್‌ನ ಪಾಲ್ಘರ್ ಜಿಲ್ಲಾ ಘಟಕದ ಅಧ್ಯಕ್ಷ ಅವಿನಾಶ್ ಜಾಧವ್ ಹಾಗೂ ಥಾಣೆ ನಗರ ಘಟಕದ ಅಧ್ಯಕ್ಷ ರವೀಂದ್ರ ಮೋರೆ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಥಾಣೆ ನಗರ ಪೊಲೀಸ್ ನೌಪಾದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿ: Gold Price Today : ಚಿನ್ನ - ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ! ಇಂದಿನ ದರ ಇಲ್ಲಿ ಪರಿಶೀಲಿಸಿ


ಮಂಗಳವಾರ ಸಂಜೆ ಗಡ್ಕರಿ ಚೌಕ್‌ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್‍ಯಾಲಿಯಲ್ಲಿ ರಾಜ್ ಠಾಕ್ರೆ ಅವರು ಪಕ್ಷದ ಸ್ಥಳೀಯ ಮುಖಂಡರೊಬ್ಬರು ನೀಡಿದ ಕತ್ತಿಯನ್ನು ಹಿಡಿದು ಪ್ರದರ್ಶಿಸಿದ್ದರು. ತಮ್ಮನ್ನು ಟೀಕಿಸಿದ್ದ ರಾಜಕಾರಣಿಗಳ ವಿರುದ್ಧ ಇದೇ ವೇಳೆ ಅವರು ತೀವ್ರ ವಾಗ್ದಾಳಿಯನ್ನೂ ನಡೆಸಿದ್ದರು.


ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾ ಕೇಳಬೇಕಾಗುತ್ತದೆ!


ಮಸೀದಿಗಳ ಹೊರಗಿನ ಧ್ವನಿವರ್ಧಕಗಳನ್ನು ಬಂದ್ ಮಾಡದಿದ್ದರೆ ಹನುಮಾನ್ ಚಾಲೀಸಾವನ್ನು ಧ್ವನಿವರ್ಧಕಗಳಲ್ಲಿ ಕೇಳಬೇಕಾಗುತ್ತದೆ ಎಂದು ಠಾಕ್ರೆ ಎಚ್ಚರಿಕೆ ನೀಡಿದ್ದಾರೆ. ‘ರಾಜ್ಯದ ಎಲ್ಲ ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ ಠಾಕ್ರೆ ಆಗ್ರಹಿಸಿದ್ದಾರೆ. ‘ನಾನು ನಿಮ್ಮ ಪ್ರಾರ್ಥನೆಗಳಿಗೆ ವಿರುದ್ಧವಾಗಿಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥನೆ ಸಲ್ಲಿಸಬಹುದು. ಆದರೆ, ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ತೆರವುಗೊಳಿಸುವ ಸಂಬಂಧ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ನಾನು ಈಗ ಎಚ್ಚರಿಕೆ ನೀಡುತ್ತಿದ್ದೇನೆ... ಧ್ವನಿ ವರ್ಧಕಗಳನ್ನು ತೆರವುಗೊಳಿಸಿ, ಇಲ್ಲದೆ ಹೋದರೆ ಮಸೀದಿಗಳ ಮುಂದೆ ನಾವು ಧ್ವನಿವರ್ಧಕಗಳನ್ನು ಹಾಕಿ, ಹನುಮಾನ್ ಚಾಲೀಸವನ್ನು ಮೊಳಗಿಸುತ್ತೇವೆ’ ಎಂದು ಹೇಳಿದ್ದರು.


ಇದನ್ನೂ ಓದಿ: Investment : ನಿಮ್ಮ ಹಣ ಡಬಲ್ ಆಗಬೇಕೆ? ಹಾಗಿದ್ರೆ, Post Office ಈ ಯೋಜನೆಯಲ್ಲಿ ಹೂಡಿಕೆ ಮಾಡಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.