ಮಾಯಾವತಿ ಭೇಟಿಯಾಗಲಿರುವ ರಾಜಸ್ಥಾನದ 6 ಬಿಎಸ್ಪಿ ಶಾಸಕರು, ಕಾರಣ ಏನ್ ಗೊತ್ತಾ?
ರಾಜಸ್ಥಾನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿನ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಬಿಎಸ್ಪಿ ಶಾಸಕ ವಾಜಿಬ್ ಅಲಿ ಹೇಳಿದ್ದಾರೆ.
ಜಯಪುರ್: ರಾಜಸ್ಥಾನದ ಆರು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಶಾಸಕರು ಜೂನ್ 1 ರಂದು ದೆಹಲಿಯಲ್ಲಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಭೇಟಿಯಾಗಲಿದ್ದಾರೆ. ರಾಜಸ್ಥಾನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಸೋಲಿನ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಬಿಎಸ್ಪಿ ಶಾಸಕ ವಾಜಿಬ್ ಅಲಿ ಹೇಳಿದ್ದಾರೆ.
ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ನಾವು ಆತ್ಮಾವಲೋಕನ ನಡೆಸುತ್ತೇವೆ ಎಂದು ಅಲಿ ಹೇಳಿದರು. ಸಭೆಯಲ್ಲಿ ಪಕ್ಷದ ಭವಿಷ್ಯದ ಕಾರ್ಯತಂತ್ರಗಳನ್ನು ಚರ್ಚಿಸಲಾಗುವುದು ಎಂದರು. ಇದೇ ವೇಳೆ ರಾಜ್ಯದಲ್ಲಿ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸುವುದಾಗಿ ಅವರು ಹೇಳಿದರು.
ರಾಜ್ಯ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆಯುವಂತಹ ಯಾವುದೇ ಅಜೆಂಡಾ ಇಲ್ಲ ಎಂದು ಸ್ಪಷ್ಟ ಪಡಿಸಿದ ಅಲಿ, ನಾವು ಸರ್ಕಾರದೊಂದಿಗೆ ಹೇಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬಹುದು ಎಂಬುದನ್ನು ಚರ್ಚಿಸಲಾಗುವುದು ಎಂದರು.