ಕೋಟಾ: ರಾಜಸ್ಥಾನದ (Rajasthan)ಕೋಟಾದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವರ ಸೇರಿ 9 ಮಂದಿ ದುರ್ಮರಣ ಹೊಂದಿದ್ದಾರೆ. ಛೋಟಿ ಪುಲಿಯಾದಿಂದ (Chhoti Puliya) ಚಂಬಲ್ ನದಿಗೆ (Chambal river) ಕಾರು ಬಿದ್ದು  ಈ ದುರಂತ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಮಾಹಿತಿ ಪ್ರಕಾರ ಕಾರಿನಲ್ಲಿದ್ದವರು ಮದುವೆಗೆ ಹೋಗುತ್ತಿದ್ದರು ಎಂದು ತಿಳಿದುಬಂದಿದೆ. ಸಾವನ್ನಪ್ಪಿರುವ 9 ಜನರಲ್ಲಿ ವರನೂ ಸೇರಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಚಂಬಲ್ ನದಿಗೆ(Chambal River) ಕಾರು ಬಿದ್ದಿದೆ. ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿದ್ದರಿಂದ ಈ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.


ಇದನ್ನೂ ಓದಿ: 7th Pay Commission : ಕೇಂದ್ರ ನೌಕರರಿಗೆ ಬಿಗ್ ಶಾಕ್! ನಿಮಗೆ ಸಧ್ಯಕ್ಕೆ ಸಿಗುವುದಿಲ್ಲ 18 ತಿಂಗಳ DA ಬಾಕಿ ಹಣ


Rajasthan Police) ತಂಡ ಮೃತದೇಹಗಳನ್ನು ನದಿಯಿಂದ ಹೊರ ತೆಗೆಯುವ ಕಾರ್ಯ ಆರಂಭಿಸಿದೆ. ಈ ಬಗ್ಗೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಇದನ್ನೂ ಓದಿ: Pensioners : ಪಿಂಚಣಿದಾರರೆ ಫೆ. 28 ರೊಳಗೆ ಈ ಕೆಲಸ ಮಾಡಿ! ಇಲ್ಲದಿದ್ದರೆ ಬಂದಾಗುತ್ತೆ ನಿಮ್ಮ ಪಿಂಚಣಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.