ರಾಜಸ್ತಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪ್ರಾಬಲ್ಯ ಮೆರೆದ ಕಾಂಗ್ರೆಸ್

ರಾಜಸ್ತಾನದ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಕಳೆದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಪ್ರಾಬಲ್ಯ ಮೆರೆದಿದೆ. 961 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಹಿಂದಿಕ್ಕಿದೆ. ಇನ್ನೊಂದೆಡೆಗೆ ಬಿಜೆಪಿ 737 ಸ್ಥಾನಗಳನ್ನು ಗಳಿಸಿದೆ.

Updated: Nov 19, 2019 , 05:51 PM IST
 ರಾಜಸ್ತಾನ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪ್ರಾಬಲ್ಯ ಮೆರೆದ ಕಾಂಗ್ರೆಸ್
ಸಾಂದರ್ಭಿಕ ಚಿತ್ರ

ನವದೆಹಲಿ: ರಾಜಸ್ತಾನದ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಕಳೆದ ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಪ್ರಾಬಲ್ಯ ಮೆರೆದಿದೆ. 961 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಬಿಜೆಪಿಯನ್ನು ಹಿಂದಿಕ್ಕಿದೆ. ಇನ್ನೊಂದೆಡೆಗೆ ಬಿಜೆಪಿ 737 ಸ್ಥಾನಗಳನ್ನು ಗಳಿಸಿದೆ.

ಕಳೆದ ಡಿಸೆಂಬರ್‌ನಲ್ಲಿ ರಾಜಸ್ಥಾನದಲ್ಲಿ ಪಕ್ಷ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ನಡೆದ ಮೊದಲ ಸ್ಥಳೀಯ ಚುನಾವಣೆಯಲ್ಲಿ ನಡೆದ ಸ್ಪರ್ಧೆಯಲ್ಲಿ ಕಾಂಗ್ರೆಸ್ ಸುಮಾರು 2,105 ವಾರ್ಡ್‌ಗಳಲ್ಲಿ ಅರ್ಧದಷ್ಟು ಗೆಲುವನ್ನು ಸಾಧಿಸಿತು. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಪ್ರದರ್ಶನಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಅಶೋಕ್ ಗೆಹ್ಲೋಟ್ 'ಸರ್ಕಾರದ ಕಾರ್ಯಕ್ಷಮತೆಯನ್ನು ಪರಿಗಣಿಸಿ ಜನರು ಜನಾದೇಶವನ್ನು ನೀಡಿರುವುದು ಸಂತೋಷದ ವಿಷಯ' ಎಂದು ಸುದ್ದಿಗಾರರಿಗೆ ತಿಳಿಸಿದರು.

ರಾಜಸ್ಥಾನದ 33 ಜಿಲ್ಲೆಗಳಲ್ಲಿ 24 ರಲ್ಲಿ ನಲವತ್ತೊಂಬತ್ತು ನಗರ ಸ್ಥಳೀಯ ಸಂಸ್ಥೆಗಳಿಗಾಗಿ ಚುನಾವಣೆ ನಡೆದಿತ್ತು, ಅದರಲ್ಲಿ ಮೂರು ಪುರಸಭೆಗಳು,18 ನಗರ ಪರಿಷತ್‌ಗಳು ಮತ್ತು 28 ನಗರ ಪಾಲಿಕಾಗಳು ಸೇರಿವೆ. ಒಟ್ಟಾರೆಯಾಗಿ 71.53 ರಷ್ಟು ನೋಂದಾಯಿತ ಮತದಾರರು ತಮ್ಮ ಮತದಾನವನ್ನು ಚಲಾಯಿಸಿದ್ದಾರೆ.2,832 ಮಹಿಳೆಯರು ಸೇರಿದಂತೆ 7,942 ಸ್ಪರ್ಧಿಗಳು ಇದ್ದರು ಎನ್ನಲಾಗಿದೆ. ಮುಂದಿನ ಮಂಗಳವಾರ ಮತ್ತು ಬುಧವಾರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಹುದ್ದೆಗಳಿಗೆ ಚುನಾವಣೆ ನಡೆಯಲಿದೆ.