Rajasthan Political Crisis: ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ನಡುವೆ ದೆಹಲಿ ದರ್ಬಾರ್ನಲ್ಲಿ ರಾಜ್ಯದ ಪ್ರಮುಖ ನಾಯಕರ ಹಾಜರಾತಿ ಮುಂದುವರೆದಿದೆ. ಈ ಹಿನ್ನೆಲೆ ಸಚಿನ್ ಪೈಲಟ್ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಮಾಹಿತಿ ಪ್ರಕಾರ ಇಂದು ಸಂಜೆ 7 ರಿಂದ 8 ಮಧ್ಯೆ ಸೋನಿಯಾ ಜೊತೆ ಸಚಿನ್ ಭೇಟಿ ನಿಗದಿಯಾಗಿದೆ ಎನ್ನಲಾಗಿದೆ. ಈ ಹಿಂದೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೋನಿಯಾ ಅವರನ್ನು ಭೇಟಿ ನಡೆಸಿ ನಡೆದ ಘಟನಾವಳಿಗಳಿಗೆ ಕ್ಷಮೆ ಕೋರಿದ್ದಾರೆ ಎಂಬುದು ಇಲ್ಲಿ ಉಲ್ಲೇಖನೀಯ. ಆದರೆ, ಕೆಸಿ ವೇಣುಗೋಪಾಲ್ ಅವರ ಹೇಳಿಕೆಯ ಬಳಿಕ ಇದೀಗ ಸೋನಿಯಾ ಗಾಂಧಿ ಮತ್ತು ಸಚಿನ್ ಪೈಲಟ್ ಭೇಟಿಯ ವರದಿಗಳು ಪ್ರಕಟಗೊಂಡಿದ್ದು, ರಾಜಸ್ಥಾನದಲ್ಲಿ ಸೋನಿಯಾ ಸರ್ಕಾರದ ಚುಕ್ಕಾಣಿ ಬದಲಾಯಿಸುತ್ತಾರೆಯೇ ಎಂಬ ಊಹಾಪೋಹಗಳು ಕೇಳಿಬರಲಾರಂಭಿಸಿವೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಎಲ್ಲಾ ವಿವಾಹಿತ ಅಥವಾ ಅವಿವಾಹಿತ ಮಹಿಳೆಯರು ಸುರಕ್ಷಿತ ಮತ್ತು ಕಾನೂನು ಬದ್ಧ ಗರ್ಭಪಾತಕ್ಕೆ ಅರ್ಹ


ಅಧ್ಯಕ್ಷ ಚುನಾವಣೆಯ ರೆಸ್ ನಿಂದ ಗೆಹಲೋಟ್ ಔಟ್ 
ಇಂದು ಬೆಳಗ್ಗೆ ಸೋನಿಯಾ ಗಾಂಧಿ ಅಶೋಕ್ ಗೆಹ್ಲೋಟ್ ಅವರನ್ನು ಭೇಟಿ ನಡೆಸಿ ಮಾತುಕತೆ ನಡೆಸಿದ್ದಾರೆ. ಈ ಸಭೆಯ ನಂತರ ಅಶೋಕ್ ಗೆಹ್ಲೋಟ್ ಹೇಳಿಕೆ ಪ್ರಕಟಗೊಂಡಿದ್ದು, ಅವರು ಕಾಂಗ್ರೆಸ್ ಅಧ್ಯಕ್ಷ ರೇಸ್‌ನಿಂದ ಹೊರಗುಳಿದಿರುವುದು ಬಹುತೇಕ ಸ್ಪಷ್ಟವಾಗಿದೆ. ತಮ್ಮ ಹೇಳಿಕೆಯ ಸಂಧರ್ಭದಲ್ಲಿ ರಾಜಸ್ಥಾನದಲ್ಲಿನ ಬೆಳವಣಿಗೆಗಳಿಗಾಗಿ ಸೋನಿಯಾ ಗಾಂಧಿಯವರಲ್ಲಿ ಕ್ಷಮೆಯಾಚಿಸಿದ್ದೇನೆ ಎಂದು ಗೆಹ್ಲೋಟ್ ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ತಾವು ಸ್ಪರ್ಧಿಸುತ್ತಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.


ಇದನ್ನೂ ಓದಿ-October 1, 2023 ರಿಂದ ಪ್ರಯಾಣಿಕ ಕಾರುಗಳಲ್ಲಿ 6 ಏರ್ ಏರ್‌ಬ್ಯಾಗ್‌ಗಳ ನಿಯಮ ಕಡ್ಡಾಯ: ನಿತೀನ್ ಗಡ್ಕರಿ


ರಾಜಸ್ಥಾನದಲ್ಲಿ ಸಿಎಂ ಬದಲಾಗಲಿದ್ದಾರೆ?
ಗೆಹ್ಲೋಟ್ ಅಧ್ಯಕ್ಷ ಸ್ಥಾನದ ರೇಸ್‌ನಿಂದ ಹೊರಗುಳಿದ ನಂತರ, ಅವರ ಸಿಎಂ ಸ್ಥಾನದ ಬಗ್ಗೆ ಅನುಮಾನ ಎದುರಾಗಿತ್ತು. ಇನ್ನೆರಡು ದಿನಗಳಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನದ ಕುರಿತು ಸೋನಿಯಾ ಗಾಂಧಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೆ.ಸಿ.ವೇಣುಗೋಪಾಲ್ ಹೇಳಿದಾಗ ಈ ಅನುಮಾನ ಮತ್ತಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ನಡೆಯುತ್ತಿರುವ ಸೋನಿಯಾ ಗಾಂಧಿ ಹಾಗೂ ಸಚಿನ್ ಪೈಲಟ್ ಭೇಟಿ ನಡೆಯುತ್ತಿದ್ದು, ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಮುಖ ಬದಲಾವಣೆಯಾಗುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ.


ಇದನ್ನೂ ನೋಡಿ-


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.