Rajasthan Political Crisis: ರಾಷ್ಟ್ರಪತಿ ಆಡಳಿತದತ್ತ ಸಾಗುತ್ತಿದೆಯೇ ರಾಜಸ್ಥಾನ? ಬಿಜೆಪಿ ತಂತ್ರ ಏನು?

Rajasthan Politics: ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ಬಿಕ್ಕಟ್ಟು ಮತ್ತು ಸಿಎಂ ಅಶೋಕ್ ಗೆಹ್ಲೋಟ್, ಸ್ಪೀಕರ್ ಸಿ.ಪಿ. ಜೋಷಿ ಅವರ 92 ಶಾಸಕರ ರಾಜೀನಾಮೆ ಕುರಿತಾದ ಮೌನ ಇದೀಗ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.  

Written by - Nitin Tabib | Last Updated : Sep 27, 2022, 03:49 PM IST
  • ಏತನ್ಮಧ್ಯೆ, ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್, ''ಚೆಂಡು ಇನ್ನೂ ಸ್ಪೀಕರ್ ಅಂಗಳದಲ್ಲಿದೆ.
  • ಅವರ ಮುಂದೆಯೇ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ.
  • ಆ ರಾಜೀನಾಮೆಗಳ ಬಗ್ಗೆ ವಿಧಾನಸಭಾಧ್ಯಕ್ಷರು ನಿರ್ಧಾರ ಕೈಗೊಳ್ಳಬೇಕು ಎಂದಿದ್ದಾರೆ.
Rajasthan Political Crisis: ರಾಷ್ಟ್ರಪತಿ ಆಡಳಿತದತ್ತ ಸಾಗುತ್ತಿದೆಯೇ ರಾಜಸ್ಥಾನ? ಬಿಜೆಪಿ ತಂತ್ರ ಏನು? title=
Rajasthan Political Crisis

Rajasthan Politics: ರಾಜಸ್ಥಾನದಲ್ಲಿ ಮುಂದುವರೆದಿರುವ ರಾಜಕೀಯ ಬಿಕ್ಕಟ್ಟು ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹಾಗೂ ಸ್ಪೀಕರ್ ಸಿ.ಪಿ. ಜೋಷಿ ಅವರುಗಳು 92 ಶಾಸಕರ ರಾಜೀನಾಮೆ ಕುರಿತು ಮೌನ ಇದೀಗ ರಾಜ್ಯ ರಾಷ್ಟ್ರಪತಿ ಆಡಳಿತದತ್ತ ಸಾಗುತ್ತಿದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಸ್ತುತ ಎಲ್ಲರ ಕಣ್ಣು ರಾಜಭವನದತ್ತ ನೆಟ್ಟಿದೆ. ಇನ್ನೊಂದೆಡೆ ರಾಜ್ಯ ಬಿಜೆಪಿ ಮಾತ್ರ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದೆ. ಪ್ರಸ್ತುತ ಬಿಜೆಪಿ ನಾಯಕರು ಸ್ಪೀಕರ್ ಸಿ.ಪಿ. ಜೋಶಿಯವರ ಮುಂದಿನ ನಡೆಯನ್ನು ನಿರೀಕ್ಷಿಸುತ್ತಿದ್ದು, ನಂತರ ಅವರು ರಾಜಭವನದ ಬಾಗಿಲು ತಟ್ಟುವ ಸಾಧ್ಯತೆಯನ್ನು ವರ್ತಿಸಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದಾರೆ. ಆದರೆ, ರಾಜಸ್ಥಾನದ ರಾಜಕೀಯದ ಕುರಿತು ಹಿರಿಯ ನಾಯಕರ ಜತೆ ಅವರು ಚರ್ಚೆ ನಡೆಸುವ ಸಾಧ್ಯತೆ ಇದೆ.

ಈ ಕುರಿತು ಮಾತನಾಡಿರುವ ವಿಧಾನಸಭೆಯ ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್, ಸರ್ಕಾರದ ಶೇ.90 ರಷ್ಟು ಶಾಸಕರು ಮತ್ತು ಸಚಿವರು ಈಗಾಗಲೇ ರಾಜೀನಾಮೆ ನೀಡಿದ್ದು, ಮುಖ್ಯಮಂತ್ರಿಗಳು ತುರ್ತು ಸಭೆ ಕರೆದು ವಿಧಾನಸಭೆ ವಿಸರ್ಜನೆಯನ್ನು ಘೋಷಿಸಬೇಕು ಎಂದು ಹೇಳಿದ್ದಾರೆ. ಇಡೀ ಪರಿಸ್ಥಿತಿಯನ್ನು ಬಿಜೆಪಿ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಸೋಮವಾರ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ಉಪನಾಯಕ ಇಬ್ಬರೂ ಪಕ್ಷದ ಶಾಸಕರು ನೀಡಿದ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಬೇಕು ಎಂದು ಒತ್ತಾಯಿಸಿದ್ದಾರೆ. ಕಾಂಗ್ರೆಸ್ ಶಾಸಕರು ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ವಿಧಾನಸಭೆ ಸ್ಪೀಕರ್ ಸಿ.ಪಿ. ಜೋಶಿಯವರು ಇದನ್ನು ಒಪ್ಪಿಕೊಳ್ಳಬೇಕು, ಕಾಂಗ್ರೆಸ್‌ನಲ್ಲಿನ ಈ ಭಿನ್ನಾಭಿಪ್ರಾಯದ ಹೊರೆಯನ್ನು ರಾಜ್ಯದ ಜನತೆ ಮೇಲೆ ಅವರು ಹೊರಿಸಬಾರದು ಎಂದು ಹೇಳಿದ್ದಾರೆ.

ಇದನ್ನೂ ಓದಿ-Pilot Vs Gehlot: 'ಬಂಡಾಯ'ದ ಕುರಿತು ವಿಷಾಧ ವ್ಯಕ್ತಪಡಿಸಿದ ಗೆಹಲೋಟ್, ಇದನ್ನು ನಿರೀಕ್ಷಿಸಿರಲಿಲ್ಲ ಎಂದ ಸೋನಿಯಾ

ಸ್ಪೀಕರ್ ಅಂಗಳಕ್ಕೆ ತಲುಪಿದ ಚೆಂಡು - ರಾಜೇಂದ್ರ ರಾಥೋಡ್
ಮಾಜಿ ಉಪ ಮುಖ್ಯಮಂತ್ರಿ ಪೈಲಟ್ ಕುರಿತು ಮಾತನಾಡಿದ ರಾಜೇಂದ್ರ ರಾಥೋಡ್, ಸಚಿನ್ ಪೈಲಟ್‌ಗಾಗಿ ಬಿಜೆಪಿಯ ಬಾಗಿಲು ಮುಚ್ಚಿಲ್ಲ. ಈ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ. ಅಂತಹ ಪರಿಸ್ಥಿತಿ ಎದುರಾದರೆ ಪಕ್ಷದ ಹೈಕಮಾಂಡ್ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್‌ಐ ನೆಲೆಗಳ ಮೇಲೆ ದಾಳಿ, ಹಲವರು ಅರೆಸ್ಟ್

ಏತನ್ಮಧ್ಯೆ, ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್, ''ಚೆಂಡು ಇನ್ನೂ ಸ್ಪೀಕರ್ ಅಂಗಳದಲ್ಲಿದೆ. ಅವರ ಮುಂದೆಯೇ ಕಾಂಗ್ರೆಸ್ ಶಾಸಕರು ರಾಜೀನಾಮೆ ಸಲ್ಲಿಸಿದ್ದಾರೆ. ಆ ರಾಜೀನಾಮೆಗಳ ಬಗ್ಗೆ ವಿಧಾನಸಭಾಧ್ಯಕ್ಷರು ನಿರ್ಧಾರ ಕೈಗೊಳ್ಳಬೇಕು, ಆಗ ಮಾತ್ರ ಬಿಜೆಪಿ ತನ್ನ ಮುಂದಿನ ನಡೆಯನ್ನು ನಿರ್ಧರಿಸಲಿದೆ. ಕಾಂಗ್ರೆಸ್ ನಲ್ಲಿ ಅಧಿಕಾರದ ಗದ್ದಲದ ಆಟವನ್ನು ನಾವೆಲ್ಲ ನೋಡುತ್ತಿದ್ದೇವೆ. ಅವರು ಪೈಲಟ್ ಅನ್ನು ಶ್ಲಾಘಿಸಿದ್ದಾರೆ ಮತ್ತು ಕಳೆದ ಒಂದೂವರೆ ವರ್ಷಗಳಿಂದ ಯಾವುದೇ ಸುಳ್ಳು ಹೇಳಿಕೆ ನೀಡದ ಅವರನ್ನು (ಪೈಲಟ್) ನಾನು ಪ್ರಶಂಸಿಸುತ್ತೇನೆ. ಅವರಿಗೆ ಎಷ್ಟೇ 'ಕೆಲಸಕ್ಕೆ ಬಾರದ’, 'ತಿರಸ್ಕೃತ', 'ಜಯ ಚಂದ್  ಎಂದು ಕರೆದರೂ ಅವರು ತಮ್ಮ ತಾಳ್ಮೆಯನ್ನು ಕಳೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News