ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ರಜಿನಿಕಾಂತ್ ಒತ್ತಾಯ

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಸೂಪರ್‌ಸ್ಟಾರ್ ರಜಿನಿಕಾಂತ್‌ ಆಗ್ರಹಿಸಿದ್ದಾರೆ.   

Last Updated : Mar 29, 2018, 08:56 PM IST
ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಗೆ ರಜಿನಿಕಾಂತ್ ಒತ್ತಾಯ title=

ಚೆನ್ನೈ: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಸೂಪರ್‌ಸ್ಟಾರ್ ರಜಿನಿಕಾಂತ್‌ ಆಗ್ರಹಿಸಿದ್ದಾರೆ. 

ಇಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಕಾವೇರಿ ನದಿ ನೀರು ನಿರ್ವಹಣೆ ಮಂಡಳಿ ರಚನೆ ಮಾಡಲು ಕೇಂದ್ರ ಸರಕಾರ ವಿಳಂಬ ಧೋರಣೆ ತೊರುತ್ತಿದೆ ಎಂದು ನಟ ಕಮಲ್ ಹಾಸನ್ ಆರೋಪಿಸಿದ್ದರಲ್ಲದೆ, ಈ ವಿಚಾರವನ್ನು ರಾಜಕೀಯಗೊಳಿಸಬೇಡಿ ಎಂದು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಮಂಡಳಿ ರಚನೆ ಸಂಬಂಧ ಪ್ರತಿಕ್ರಿಯಿಸಿರುವ ರಜಿನಿಕಾಂತ್, ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

"ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ ಬಗೆಹರಿಯಬೇಕಾದರೆ, ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಕಾವೇರಿ ನಿರ್ವಹಣಾ ಮಂಡಳಿ ರಚನೆಯಾಗಬೇಕು. ನ್ಯಾಯಕ್ಕೆ ಜಯ ಸಿಗುತ್ತದೆ ಎಂದು ನಾನು ಭಾವಿಸಿದ್ದೇನೆ" ಎಂದು ರಜಿನಿಕಾಂತ್ ಟ್ವೀಟ್ ಮಾಡಿದ್ದಾರೆ.

Trending News