ನವದೆಹಲಿ: ಚೀನಾ ಮತ್ತು ಪಾಕಿಸ್ತಾನ ಎರಡೂ ಗಡಿ ಹಂಚಿಕೆ ಪ್ರದೇಶಗಳಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುಂದಿನ ವಾರ ಲೇಹ್‌ಗೆ ಭೇಟಿ ನೀಡುವ ಸಾಧ್ಯತೆ ಇದೆ.


COMMERCIAL BREAK
SCROLL TO CONTINUE READING

"ಮುಂದಿನ ವಾರದ ಆರಂಭದಲ್ಲಿ ರಕ್ಷಣಾ ಸಚಿವರು ಲೇಹ್‌ಗೆ ಭೇಟಿ ನೀಡುವ ಸಾಧ್ಯತೆಯಿದ್ದು, ದೌಲತ್ ಬೇಗ್ ಓಲ್ಡಿ ಮತ್ತು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿರುವ ಇತರ ಪ್ರದೇಶಗಳಿಗೆ ಭೇಟಿ,  ಅಲ್ಲಿ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸುವ ಸಾಧ್ಯತೆಯಿದೆ" ಎಂದು ರಕ್ಷಣಾ ಇಲಾಖೆ ಮೂಲಗಳು ತಿಳಿಸಿವೆ.


ಚೀನಾ ಗಡಿಯ ಸಮೀಪವಿರುವ ಲಡಾಖ್ ನ ಎತ್ತರದ ಪ್ರದೇಶಗಳಲ್ಲಿ ಭಾರತೀಯ ಸೇನೆಯು 'ಚಾಂಗ್ ಥಾಂಗ್ 'ಎಂಬ ಹೆಸರಿನಲ್ಲಿ ನಡೆಸುತ್ತಿರುವ ಸಶಸ್ತ್ರಾಭ್ಯಾಸದ ಸಂದರ್ಭದಲ್ಲಿ ರಕ್ಷಣಾ ಸಚಿವರು ಭೇಟಿ ನೀಡುವ ಸಾಧ್ಯತೆಯಿದೆ.